ಧಾರವಾಡ,01 : ವಿನಯ ಕುಲಕರ್ಣಿ ಅವರಿಗೆ ಹೈಕೋರ್ಟ್ ಜಾಮೀನು.ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ.
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಿನಯ ಕುಲಕರ್ಣಿ ಅವರನ್ನು ತಪ್ಪಿತಸ್ಥ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ತೀರ್ಪಿನ ಬಳಿಕ ಧಾರವಾಡದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಬೆಂಬಲಿಗರು ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮಾ ಬಲೋಗಿ ಅವರ ನೇತ್ರತ್ವದಲ್ಲಿ ಸಂಭ್ರಮಾಚರಣೆ ನಡೆಸಿದರು. ಧಾರವಾಡದ ಜೂಬ್ಲಿ ವೃತ್ತದಲ್ಲಿ ಜಮಾಯಿಸಿದ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ, ಪರಸ್ಪರ ಅಭಿನಂದನೆ ಸಲ್ಲಿಸಿ ತೀರ್ಪನ್ನು ಸ್ವಾಗತಿಸಿದರು.ವಿನಯ ಪರ ಜಯಘೋಷಗಳನ್ನು ಕೂಗಿ ಸಂತಸ ವ್ಯಕ್ತಪಡಿಸಿದರು.ನ್ಯಾಯದ ಪರವಾಗಿ ತೀರ್ಪು ಬಂದಿದೆ ಎಂದು ಹೇಳಿದ ಬೆಂಬಲಿಗರು, ನ್ಯಾಯಾಂಗದ ಮೇಲಿನ ತಮ್ಮ ವಿಶ್ವಾಸ ಮತ್ತಷ್ಟು ಬಲವಾಗಿದೆ ಎಂದು ಅಭಿಪ್ರಾಯಪಟ್ಟರು.
ಹಾಗೆಯೇ, ವಿನಯ ಕುಲಕರ್ಣಿ ಅಭಿಮಾನಿ ಬಳಗದಿಂದ ನಗರದ ಗಾಂಧಿಚೌಕ್‌ನಲ್ಲಿ ನೂರಾರು ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಮಾಡಲಾಯಿತು,
ಗೌರಮ್ಮ ಬೋಲೋಗಿ, ಬಸವರಾಜ ಜಾಧವ ಕಾಜಾಸಾಭ ದೂಡ್ಡಮನಿ. ಶಿವಣ್ಣ ನಿಗದಿ.ನಾರಾಯಣ ಸುಳ್ಳದ.ಶಿವಾನಂದ ಗಿರಿಯಪ್ಪನವರ ಇತರರು. ಉಪಸ್ಥಿತರಿದ್ದರು.