LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ತಮಿಳುನಾಡು ನೀಟ್​ ವಿನಾಯಿತಿ ಮಸೂದೆ ತಿರಸ್ಕರಿಸಿದ ಕೇಂದ್ರ; ಸ್ಟಾಲಿನ್‌ ಕೆಂಡಾಮಂಡಲ

ಚೆನ್ನೈ, ತಮಿಳುನಾಡು: ನೀಟ್​​ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ)ಗೆ ವಿನಾಯಿತಿ ಕೋರಿ ರಾಜ್ಯ ಸಲ್ಲಿಸಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವ ಕ್ರಮವನ್ನು ತಮಿಳುನಾಡು ಎಂ.ಕೆ ಸ್ಟಾಲಿನ್​ ತೀವ್ರವಾಗಿ ಖಂಡಿಸಿದ್ದಾರೆ.


ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣದಲ್ಲಿ ಸುದೀರ್ಘಕಾಲದಿಂದ ಅತ್ಯುತ್ತಮ ಪ್ರದರ್ಶನ ಹೊಂದಿದೆ. ಕ್ಲಾಸ್​ 12ರ ಅಂಕಗಳ ಆಧಾರದ ಮೇಲೆ ಎಲ್ಲರನ್ನು ಒಳಗೊಳ್ಳುವ ನ್ಯಾಯಸಮ್ಮತ ಪ್ರವೇಶಾತಿ ಪ್ರಕ್ರಿಯೆ ಜಾರಿ ಮಾಡುವಂತೆ ರಾಜ್ಯ ಸರ್ಕಾರ ಒತ್ತಿ ಹೇಳಿದ್ದು, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಸಮಾನ ಅವಕಾಶದ ಭರವಸೆ ನೀಡಿದೆ. ಈ ವ್ಯವಸ್ಥೆಯನ್ನು ಮಾಜಿ ಸಿಎಂ ಕೆ ಕರುಣಾನಿಧಿ ಪರಿಚಯಿಸಿದ್ದು, ಇದು ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ವೃತ್ತಿಪರರಾಗಲು ಅವಕಾಶ ನೀಡುವ ಜೊತೆಗೆ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವೈದ್ಯಕೀಯ ಸೌಲಭ್ಯ ಸಿಗುವ ಭರವಸೆ ನೀಡಿತ್ತು.


ಆದರೆ, ನೀಟ್​ ಸಾಮಾಜಿಕ ಮತ್ತು ಆರ್ಥಿಕವಾಗಿ ಬಳಲುವ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದುಬಾರಿ ಕೋಚಿಂಗ್​ ಶಾಲೆಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ಈ ಪರೀಕ್ಷೆಯು ನಗರ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಸೌಲಭ್ಯಗಳನ್ನು ಹೊಂದಿರುವುದರಿಂದ ಅವರಿಗೆ ಮಾತ್ರ ಹೆಚ್ಚಿನ ಅನುಕೂಲ ಮಾಡಿಕೊಡುತ್ತದೆ. ಆದರೆ, ಸೌಲಭ್ಯವಂಚಿತ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಸಿಗದೇ ಹೋಗುತ್ತಿದೆ ಎಂದು ಸ್ಟಾಲಿನ್​ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST