LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಲಾರಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷರಾಗಿ ಚಲ್ಲಾ ಮಹೇಶ್ ಆಯ್ಕೆ 

ಬಳ್ಳಾರಿ. ಮೇ 19: ಬಳ್ಳಾರಿ ಜಿಲ್ಲಾ ಲಾರಿ ಮಾಲೀಕರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ  ಚಲ್ಲಾ ಮಹೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
 ಇಂದು ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಎಲ್ಲರ ಸಹಮತದಿಂದ ಚಲ್ಲಾ ಮಹೇಶ್ ಅವರನ್ನು  ಅವಿರೋಧವಾಗಿ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು.
 ಅದೇ ರೀತಿಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ವೈ ಶ್ರೀನಿವಾಸ್ ಮತ್ತು ನಾರಾಯಣಸ್ವಾಮಿ ಕಾರ್ಯದರ್ಶಿಯಾಗಿ ಜೆ ಎಸ್ ರಮೇಶ್ ಬಾಬು ಖಜಂಚಿಯಾಗಿ ಲಕ್ಷ್ಮಿ ನಾರಾಯಣ ಇವರುಗಳನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದು ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ.
 ನೂತನ ಜಿಲ್ಲಾಧ್ಯಕ್ಷ ಮಹೇಶ್ ಮಾತನಾಡಿ, ಡೀಸೆಲ್ ಬೆಲೆಯ ಸತತ ಏರಿಕೆಯಿಂದ ಲಾರಿ ಮಾಲೀಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದರ ಜೊತೆಗೆ ಲಾರಿಗಳ ಬಾಡಿಗೆಯನ್ನು ಸಹ ಹೆಚ್ಚಿಸಬೇಕು ಎಂಬುದು ಸೇರಿದಂತೆ ಲಾರಿ ಮಾಲೀಕರ ಸರ್ವ ಸಮಸ್ಯೆಗಳನ್ನು ಪರಿಹರಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಜೊತೆಗೆ ಎಲ್ಲರನ್ನೂ ಸಹ ಮತಕ್ಕೆ ಪಡೆದು ಸಂಘವನ್ನು ಮುನ್ನಡೆಸಿಕೊಂಡು ಹೋಗುತ್ತೇನೆ, ಇನ್ನೆಷ್ಟು ಲಾರಿ ಮಾಲೀಕರನ್ನು ಈ ಸಂಘದಲ್ಲಿ ಸದಸ್ಯರನ್ನಾಗಿ ನೋಂದಣಿ ಮಾಡುವ ಉದ್ದೇಶವಿದೆ ಎಂದರು.
 ಈ ಸಂದರ್ಭದಲ್ಲಿ ಶ್ರೀನಿವಾಸ್ ರಮೇಶ್ ಬಾಬು ನಾರಾಯಣ್ ಸ್ವಾಮಿ ಲಕ್ಷ್ಮಿ ನಾರಾಯಣ ಸೇರಿದಂತೆ ಹಲವಾರು ಜನ ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಸದಸ್ಯರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್