LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಂಟರ ಕ್ರೀಡೋತ್ಸವಕ್ಕೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ನಗರದಲ್ಲಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಬಂಟರ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಂಟರ ಕ್ರೀಡೋತ್ಸವಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ದೇಹದ ಆರೋಗ್ಯಕ್ಕೆ ಮಾತ್ರವಲ್ಲದೆ ಮನಸ್ಸಿನ ಚೈತನ್ಯಕ್ಕೂ ಸಹಕಾರಿ ಎಂದು ತಿಳಿಸಿದರು. ಸಮಾಜದ ಒಗ್ಗಟ್ಟು ಮತ್ತು ಬಾಂಧವ್ಯವನ್ನು ಬಲಪಡಿಸುವಲ್ಲಿ ಇಂತಹ ಕ್ರೀಡೋತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಯುವಕರು ಕ್ರೀಡೆಗಳತ್ತ ಹೆಚ್ಚು ಆಸಕ್ತಿ ತೋರಿಸಿ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಬಂಟ ಸಮುದಾಯವು ಶಿಕ್ಷಣ, ಉದ್ಯಮ ಹಾಗೂ ಸಮಾಜ ಸೇವೆಯಲ್ಲಿ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದ್ದು, ಇಂತಹ ಕ್ರೀಡಾ ಕಾರ್ಯಕ್ರಮಗಳ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆಯುತ್ತದೆ ಎಂದು ಹೇಳಿದರು.
ಈ ಕ್ರೀಡೋತ್ಸವದಲ್ಲಿ ವಿವಿಧ ವಯೋಮಾನದವರಿಗೆ ತಕ್ಕಂತೆ ಹಲವು ಕ್ರೀಡಾ ಸ್ಪರ್ಧೆಗಳು ಆಯೋಜಿಸಲಾಗಿದ್ದು, ಮಹಿಳೆಯರು ಮತ್ತು ಮಕ್ಕಳೂ ಸಹ ಉತ್ಸಾಹದಿಂದ ಭಾಗವಹಿಸಿದರು. ಯ
ಈ ಸಂದರ್ಭದಲ್ಲಿ ಬಂಟ್ ಸಮುದಾಯದ ಮುಖಂಡರು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ