LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಛಲ, ಏಕಾಗ್ರತೆಯಿಂದ ಉನ್ನತ ಗುರಿ ಸಾಧಿಸಿ: ಪ್ರೊ. ಎನ್.ಎಂ. ಸಾಲಿ

ಬಳ್ಳಾರಿ: 04:ವಿದ್ಯಾರ್ಥಿಗಳು ತಾವು ಕಲಿತ ವಿದ್ಯೆಯನ್ನು ಸಮಾಜದ ಅಭಿವೃದ್ಧಿಗೆ ಉಪಯೋಗಿಸುವ ಮೂಲಕ ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು. ಶಿಕ್ಷಣವು ಕೇವಲ ಉದ್ಯೋಗ ಪಡೆಯಲು ಮಾತ್ರವಲ್ಲ, ಸಮಾಜದ ಏಳಿಗೆಗೆ ಸಹಕಾರಿಯಾಗುವ ವ್ಯಕ್ತಿತ್ವವನ್ನು ನಿರ್ಮಿಸುವ ಸಾಧನವಾಗಬೇಕು ಎಂದು ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಎನ್.ಎಂ. ಸಾಲಿ ಹೇಳಿದರು.
ತಾಲೂಕಿನ ಮೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ನಡೆದ 2025–26ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನವು ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಮಹತ್ವದ ಘಟ್ಟವಾಗಿದೆ. ಈ ಅವಧಿಯಲ್ಲಿ ಏಕಾಗ್ರತೆ, ಶಿಸ್ತು ಹಾಗೂ ಪರಿಶ್ರಮವನ್ನು ಅಳವಡಿಸಿಕೊಂಡರೆ ಯಾವುದೇ ಗುರಿಯನ್ನು ಸಾಧಿಸಬಹುದು. ಜೀವನದಲ್ಲಿ ಎದುರಾಗುವ ಸವಾಲುಗಳು ಹಾಗೂ ಕೊರತೆಗಳನ್ನು ಮೀರಿ ಛಲ, ಆತ್ಮವಿಶ್ವಾಸ ಮತ್ತು ಸ್ವಾಭಿಮಾನದೊಂದಿಗೆ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.
ಇಂದಿನ ಯುವಜನತೆ ತಾತ್ಕಾಲಿಕ ಮನರಂಜನೆ ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಒಳಗಾಗದೆ ತಮ್ಮ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಶ್ರದ್ಧೆ, ಪ್ರಾಮಾಣಿಕತೆ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಮಾತ್ರ ಆದರ್ಶ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಬಿ. ಸರೋಜಾ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಕಾಲೇಜು ಕಳೆದ ಹಲವು ವರ್ಷಗಳಿಂದ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣಪ್ಪ ಮಾತನಾಡಿ, ಶಿಕ್ಷಣವು ಜೀವನದ ಯಶಸ್ಸಿನ ಮೂಲಾಧಾರವಾಗಿದೆ. ವಿಶೇಷವಾಗಿ ವಿದ್ಯಾರ್ಥಿನಿಯರು ಶಿಕ್ಷಣದ ಮೂಲಕ ಆತ್ಮವಿಶ್ವಾಸ ಬೆಳೆಸಿಕೊಂಡು ಸ್ವಾವಲಂಬಿಗಳಾಗಬೇಕು. ಗ್ರಾಮೀಣ ಭಾಗದಲ್ಲಿರುವ ಕಾಲೇಜುಗಳ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿವಿಧ ಸಾಂಸ್ಕೃತಿಕ, ಸಾಹಿತ್ಯ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ಡಾ. ಬಿ.ಜಿ. ಕಲಾವತಿ ವಾರ್ಷಿಕ ವರದಿ ಮಂಡಿಸಿ, ಕಾಲೇಜಿನ ಶೈಕ್ಷಣಿಕ ಸಾಧನೆಗಳು, ವಿದ್ಯಾರ್ಥಿಗಳ ಪ್ರಗತಿ ಹಾಗೂ ವಿವಿಧ ಚಟುವಟಿಕೆಗಳ ವಿವರ ನೀಡಿದರು.
ಕಾರ್ಯಕ್ರಮದಲ್ಲಿ ಕಚೇರಿ ಅಧೀಕ್ಷಕಿ ಸಾವಿತ್ರಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಉಪನ್ಯಾಸಕ ಡಾ. ಟಿ. ಬಸವರಾಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್