LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ

ವ್ಯಂಗ್ಯ, ಹಾಸ್ಯ, ಪ್ರಶಂಸೆ, ಎಚ್ಚರಿಕೆ ಮಾತುಗಳನ್ನು ಆಡಿದ ಸಿಎಂ ಸಿದ್ದರಾಮಯ್ಯ

ಮೈಸೂರು ಸೆ 21: ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.

ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ.

ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, "ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. " ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ" ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್