LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿಯವರು ಅಭಿವೃದ್ಧಿ ವಿಚಾರದಲ್ಲಿ ಸುಳ್ಳು ಹೇಳ್ತಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು,21: ಬಿಜೆಪಿಯವರು ಅಭಿವೃದ್ಧಿ ವಿಚಾರದಲ್ಲಿ ಸುಳ್ಳು ಹೇಳ್ತಾರೆ. ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹಿಂದೆ ನೀರಾವರಿಗೆ 16000 ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಾರೆ ಎಂದು ಹೇಳಿದರು.

ನಾವು ಗ್ಯಾರಂಟಿಯನ್ನು ಸೇರಿಸಿ 1.20 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದೇವೆ. ಅಭಿವೃದ್ಧಿ ಶೂನ್ಯ ಅಭಿವೃದ್ಧಿ ಶೂನ್ಯ ಅಂತಾರೆ. ಬಡವರಿಗೆ ಆರ್ಥಿಕವಾಗಿ ಸಬಲತೆ ಕೊಡುವುದು ಅಭಿವೃದ್ಧಿಯಲ್ಲವೇ?. ಈ ದೇಶಕ್ಕೆ ಬರೀ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು. ಆರ್ಥಿಕವಾಗಿ ಸಾಮಾಜಿಕವಾಗಿ ಸ್ವಾತಂತ್ರ್ಯ ಬಂದರೆ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತೆ ಎಂದು ಡಾ. ಬಿ. ಆರ್. ಅಂಬೇಡ್ಕರ್ ಹೇಳಿದ್ದರು ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ