LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅವಧಿ ಮೀರಿದ ಆಹಾರ ಮಾರಾಟ: ಮಾಲೀಕರಿಗೆ ಮುಖ್ಯಮಂತ್ರಿ ಕಚೇರಿ ಎಚ್ಚರಿಕೆ

ಬೆಂಗಳೂರು: ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿದೆ.


ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ, ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್