LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಬಾಲವಿಕಾಸ ನಡಿಗೆ ಪಾಲಕರ ಕಡೆಗೆ".ಅಕಾಡೆಮಿಯಿಂದ ತರಬೇತಿ ಕಾರ್ಯಕ್ರಮ.



ಧಾರವಾಡ,ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಭಿವೃದ್ಧಿ ಯೋಜನೆ ಹುಬ್ಬಳ್ಳಿ–ಧಾರವಾಡ (ಶಹರ) ಇವರ ಸಂಯುಕ್ತಾಶ್ರಯದಲ್ಲಿ “ಬಾಲವಿಕಾಸ ನಡಿಗೆ ಪಾಲಕರ ಕಡೆಗೆ” ಎಂಬ ಒಂದು ದಿನದ ತರಬೇತಿ ಕಾರ್ಯಕ್ರಮವು ಧಾರವಾಡದ ರಂಗಾಯಣದಲ್ಲಿರುವ ಸುವರ್ಣಾ ಸಾಂಸ್ಕೃತಿಕ ಸಮುಚ್ಚಯ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಅಡಿವೇಶ ಗಿರೆಪ್ಪ ಇಟಗಿ ಉದ್ಘಾಟಿಸಿದರು. ಅಧ್ಯಕ್ಷೀಯ ಸ್ಥಾನವನ್ನು ಜಂಟಿ ನಿರ್ದೇಶಕರಾದ ಶ್ರೀಮತಿ ಅಕ್ಕಮಹಾದೇವಿ ಕೆ.ಹೆಚ್ ವಹಿಸಿದ್ದರು.
ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಶ್ರೀ ಅಡಿವೇಶ ಇಟಗಿ ಅವರು, “ಮಕ್ಕಳು ಉದ್ಯಾನವನದ ಮೊಗ್ಗುಗಳಂತೆ. ಅವರನ್ನು ಪ್ರೀತಿ, ಕಾಳಜಿ ಮತ್ತು ಸಂಸ್ಕಾರದೊಂದಿಗೆ ಪೋಷಿಸಿದರೆ ಉತ್ತಮ ವ್ಯಕ್ತಿತ್ವ ಬೆಳೆಸಬಹುದು” ಎಂದು ಸಂಸ್ಕೃತ ಶ್ಲೋಕಗಳು ಹಾಗೂ ಉದಾಹರಣೆಗಳ ಮೂಲಕ ವಿವರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀಮತಿ ಅಕ್ಕಮಹಾದೇವಿ ಅವರು, ಈ ಕಾರ್ಯಕ್ರಮವನ್ನು ರಾಜ್ಯದ ಆರು ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದು, ಇದರ ಗುರಿ ಹಾಗೂ ಉದ್ದೇಶಗಳನ್ನು ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಡಾ. ಹೆಚ್.ಹೆಚ್ ಕುಕನೂರ ಅವರು ಮಾತನಾಡಿ, ಪೋಕ್ಷೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ, ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕಪಡೆ” ಕಾರ್ಯನಿರ್ವಹಿಸುತ್ತಿರುವ ಕುರಿತು ಮಾಹಿತಿ ನೀಡಿದರು. ಸಂಕಷ್ಟದಲ್ಲಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಎಸ್.ಎಸ್ ಕೆಳದಿಮಠ ಅವರು ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳ ಪೋಷಣೆಯಲ್ಲಿ ಪಾಲಕರ ಜವಾಬ್ದಾರಿಗಳ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಡಾ. ಕಮಲವ್ವ ಬೈಲೂರ, ಶ್ರೀ ರಾಮಕೃಷ್ಣ ಸದಲಗಿ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಡಾ. ಸುರೇಶ ಕುಲಕರ್ಣಿ, ಡಾ. ಸ್ವಪ್ನಾ ಪಾಂಡುರಂಗಿ, ಶ್ರೀ ಭರತಕುಮಾರ ಚಂದನಕರ ಮತ್ತು ಶ್ರೀ ನಂದಪ್ಪಗೌರ ದ್ಯಾಪೂರ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಸುನೀತಾ ಪಾಟೀಲ (ಹುಬ್ಬಳ್ಳಿ–ಧಾರವಾಡ ಶಹರ) ಹಾಗೂ ಶ್ರೀ ಮಂಜುನಾಥ ಕುಂಬಾರ (ಧಾರವಾಡ ಗ್ರಾಮೀಣ) ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್