LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಚೌಕಿದಾರ್ ರಿಲೀಸ್ ಡೇಟ್










ಥಾವರ ಸಿನಿಮಾ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ 'ಚೌಕಿದಾರ್'. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

     ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚೌಕಿದಾರ್ ರಿಲೀಸ್ ಡೇಟ್ ಅನೌನ್ಸ್ ಮಾಡಿ, ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಇದೇ ತಿಂಗಳ 30ರಂದು 'ಚೌಕಿದಾರ್' ಸಿನಿಮಾ ತೆರೆಗೆ ಬರಲಿದೆ.

     ಪೃಥ್ವಿ ಅಂಬಾರ್ ನಾಯಕನಾಗಿ ಹಾಗೂ ಧನ್ಯ ರಾಮ್ ಕುಮಾರ್ ನಾಯಕಿಯಾಗಿ ನಟಿಸಿರುವ 'ಚೌಕಿದಾರ್' ಸಿನಿಮಾದಲ್ಲಿ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಸುಧಾರಾಣಿ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಧರ್ಮ, ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

     ವಿ ಎಸ್ ಎಂಟರ್ಟೈನ್ಮೆಂಟ್ ಬ್ಯಾನರ್ನಡಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ.ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ,‌ ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

     ಫ್ಯಾಮಿಲಿ, ಅಪ್ಪ-ಮಗನ ಬಾಂಧವ್ಯದ ಕಥೆ ಹೊಂದಿರುವ ಈ ಸಿನಿಮಾಕ್ಕೆ ಸೆನ್ಸಾರ್‌ ಮಂಡಳಿಯು ಯು/ಎ ಸರ್ಟಿಫಿಕೇಟ್‌ ನೀಡಿದೆ. ಮುರುಳಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ, ಜೈ ಸುಬ್ರಹ್ಮಣ್ಯ ಸಾಹಸ ದೃಶ್ಯಗಳು ಚಿತ್ರಕ್ಕಿದೆ.
































Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್