LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮದುವೆಗೆ ನಿರಾಕರಿಸಿದಕ್ಕೆ ನೇಹಾಳ ಕೊಲೆ: ಸ್ಪಷ್ಟಪಡಿಸಿದ ಸಿಐಡಿ

ಹುಬ್ಬಳ್ಳಿ, ಜುಲೈ 10: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ  ಪುತ್ರಿ ನೇಹಾ ಹಿರೇಮಠ ಕೊಲೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕೊಲೆ ಹಿಂದೆ ಲವ್​ ಜಿಹಾದ್​ ಇದೆ ಅಂತ ನೇಹಾ ತಂದೆ ನಿರಂಜನ ಹಿರೇಮಠ, ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ಮಾಡಿದ್ದವು.

ಪ್ರಕರಣದ ತನಿಖೆ ನಡೆಸಿದ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ. ಮದುವೆಗೆ ನಿರಾಕರಿಸಿದಕ್ಕೆ ನೇಹಾಳನ್ನು ಫಯಾಜ್​ ಕೊಲೆ ಮಾಡಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.​

ಕೊಲೆಯಾದ 81 ದಿನಗಳ ಬಳಿಕ ಸಿಐಡಿ ಅಧಿಕಾರಿಗಳು 483 ಪುಟಗಳ ಚಾರ್ಜ್​ ಶೀಟ್​ ಸಲ್ಲಿಸಿದ್ದಾರೆ. ಚಾರ್ಜ್​​ ಶೀಟ್​ನಲ್ಲಿ ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ 99 ಸಾಕ್ಷ್ಯಗಳನ್ನು ಉಲ್ಲೇಖಿಸಿದ್ದಾರೆ.

ನೇಹಾ ಹಿರೇಮಠ ಮತ್ತು ಆರೋಪಿ ಫಯಾಜ್​ ಹುಬ್ಬಳ್ಳಿಯ ಪಿಸಿ ಜಾಬಿನ್​ ಕಾಲೇಜಿನಲ್ಲಿ ಬಿಸಿಎ ಅಧ್ಯಯನ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದರು. ಇಬ್ಬರೂ ಆರಂಭದಲ್ಲಿ ಸ್ನೇಹಿತರಾಗಿದ್ದರು. ನಂತರ ಪ್ರೀತಿಸಲು ಆರಂಭಿಸಿದ್ದರು. 2024ರ ಮಾರ್ಚ್​ ತಿಂಗಳಲ್ಲಿ ಇಬ್ಬರ ಮಧ್ಯೆ ಜಗಳವಾಗಿ, ಮನಸ್ತಾಪ ಉಂಟಾಯಿತು. ಬಳಿಕ ನೇಹಾ ಆರೋಪಿ ಫಯಾಜ್​ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದಳು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್