ಬೆಂಗಳೂರು, ಜುಲೈ 8: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಪೊಲೀಸರು ಹಲವು ವಿಚಾರಗಳನ್ನು ದಾಖಲಿಸಿಕೊಂಡಿದ್ದಾರೆ. ಸದ್ಯ ತನಿಖೆಯಲ್ಲಿ ಕಂಡುಬಂದ ಎಲ್ಲಾ ಅಂಶಗಳನ್ನು ಸಿಐಡಿ ವರದಿಯಲ್ಲಿ ದಾಖಲಿಸಿಕೊಳ್ಳಲಾಗಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗಾಗಿ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇ ಘಟನೆಗೆ ಮುಖ್ಯ ಕಾರಣ ಎಂದು ಸಿಐಡಿ ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ.
ಆರ್ಸಿಬಿ ಗೆಲುವಿನ ಮರುದಿನವೇ ಕಾರ್ಯಕ್ರಮ ಆಯೋಜಿಸಲು ಆರ್ಸಿಬಿ ಸಿಇಓ ರಾಜೇಶ್ ಮೆನನ್, ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಮಿತಿ (ಕೆಎಸ್ಸಿಎ) ಮೇಲೆ ಒತ್ತಡ ಹೇರಿದ್ದರು. ಈ ಇಬ್ಬರು ವ್ಯಕ್ತಿಗಳಿಂದಾಗಿಯೇ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು ಎಂಬ ಮಾಹಿತಿಯನ್ನು ಸಿಐಡಿ ಕಲೆಹಾಕಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.