LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹವಾಮಾನ ಬದಲಾವಣೆಯ ಕ್ರಿಯಾಯೋಜನೆ ತರಬೇತಿ ಕಾರ್ಯಕ್ರಮ

ಕೊಪ್ಪಳ ಜೂನ್ 06: ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಹವಾಮಾನ ಬದಲಾವಣೆ ಕುರಿತು ಶುಕ್ರವಾರ (ಜೂನ್ 5ರಂದು) ಜಿಲ್ಲಾ ಪಂಚಾಯತ್ ಸಮಿತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.
 ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ಅಧಿಕಾರಿಗಳಾದ ಡಿ. ಮಂಜುನಾಥ ಅವರು ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು. ಬಳಿಕ ಅವರು, ಹವಾಮಾನ ಬದಲಾವಣೆ ಅಂತರಾಷ್ಟ್ರೀಯ ಮತ್ತು ಸ್ಥಳೀಯವಾಗಿ ಹೇಗೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು ಹಾಗೂ ತರಬೇತಿಯ ಉಪಯೋಗ ಪಡೆಯುವಂತೆ ಶಿಬಿರಾರ್ಥಿಗಳಿಗೆ ತಿಳಿಸಿದರು.
 ಎಂಪ್ರಿ ಸಂಸ್ಥೆ ಬೆಂಗಳೂರಿನ ಹಿರಿಯ ಸಮಾಲೋಚಕರಾದ ಡಾ. ಬಿ. ಸರಿತ ಅವರು ಮಾತನಾಡಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಯು, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಾಯತ್ತ ಸಂಸ್ಥೆಯಾಗಿದ್ದು, ಕರ್ನಾಟಕ ಸರ್ಕಾರದ ನಿರ್ದೇಶನದಂತೆ “ಹವಾಮಾನ ಬದಲಾಣೆಯ ಕುರಿತಾದ ಕರ್ನಾಟಕ ರಾಜ್ಯ ಕ್ರಿಯಾಯೋಜನೆ ”ಯನ್ನು ತಯಾರಿಸಿರುವ 2024ರಲ್ಲಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾಣೆ ಮಂತ್ರಾಲಯದಿಂದ ಅನುಮೋದನೆಗೊಂಡಿದೆ. ಹವಾಮಾನ ಬದಲಾಣೆಯ ವರದಿಯಲ್ಲಿನ ಕಾರ್ಯ ಅಂಶಗಳನ್ನು ಆಧಾರವಾಗಿಟ್ಟು ಕೊಂಡುವಿವಿಧ ಇಲಾಖೆಗಳು ಪ್ರಮುಖ ಕಾರ್ಯಕ್ಷಮತೆ ಸೂಚಕಗಳನ್ನು 2025-2030ರ ಅವಧಿಗೆ ಗುರಿಗಳೊಂದಿಗೆ ನಿಗದಪಡಿಸಿವೆೆ. ಈ ಸೂಚಕಗಳ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಅಧಿಕಾರಿ ವರ್ಗ ಹಾಗೂ ಇತರೆ ಸಂಘ ಸಂಸ್ಥೆಗಳ ಸಾಮರ್ಥ್ಯ ಬೆಳವಣಿಗೆ ಉದ್ದೇಶದೊಂದಿಗೆ ಸಂಸ್ಥೆಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯವರ ಸಹಯೋಗದೊಂದಿಗೆ 2026-27ನೇ ಸಾಲಿನಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಈ ವಿಷಯವನ್ನು ವಿಸ್ತೃತಗೊಳಿಸಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡಂತೆ ಹಲವು ಕ್ಷೇತ್ರಗಳ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಇತರೆ ಪಾಲುದಾರುಗಳ ಪ್ರತಿನಿಧಿಗಳಿಗೆ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಕೊಪ್ಪಳ ಜಿಲ್ಲೆಯಲ್ಲಿ ಈ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ಸಾಂಖ್ಯೀಕ ಅಧಿಕಾರಿಗಳಾದ ಬಸವರಾಜ, ಬೆಂಗಳೂರು ಜಲಸಂಪನ್ಮೂಲ ಇಲಾಖೆಯ ಎ.ಸಿ.ಐ.ಡಬ್ಲ್ಯೂಆರ್.ಎಂ ಶಶಿಕುಮಾರ, ಜಿ.ಪಂ ಜಿಲ್ಲಾ ಎನ್.ಆರ್.ಡಿ.ಎಂ.ಎಸ್ ಕೇಂದ್ರದ ಯೋಜನಾ ಸಂಯೋಜಕರಾದ ಗುರುಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದು, ಕಾರ್ಯಕ್ರಮದ ಕುರಿತು ಮಾತನಾಡಿದರು.
 ಬಸವರಾಜ ಅವರು ತರಬೇತಿಯ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು. ತರಬೇತಿಯಲ್ಲಿ ಒಟ್ಟು 45 ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಹಲವು ಕ್ಷೇತ್ರಗಳ ಸಂಘ ಸಂಸ್ಥೆಗಳು ಶಿಕ್ಷಣ ಸಂಸ್ಥೆಗಳು ಹಾಗೂ ಇತರೆ ಪಾಲದಾರರುಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್