LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದುಶ್ಚಟಗಳಿಗೆ ಬಲಿಯಾಗದಂತೆ ಯುವಸಮುದಾಯಕ್ಕೆ ಸಿಎಂ ಕರೆ

ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 15: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಜ್ಯ NSS ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಬಾಗಿತ್ವದಲ್ಲಿ ವಿಧಾನಸೌಧ ದ ಬ್ಯಾಕ್ವೆಟ್ಹಾಲ್ ನಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನ 2.0 ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆನೀಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು

 

ತಂಬಾಕು ಸೇವನೆ ಮಾಡದಂತೆ ಯುವಜನರಿಂದ ಪ್ರತಿಜ್ಞೆ
ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸುವ ಕರ್ತವ್ಯವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದರು.

ತಂಬಾಕು ಸೇವಿಸುವ ಶೇ.50 ರಷ್ಟು ಜನರಿಗೆ ಕ್ಯಾನ್ಸರ್

WHO ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದರು.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ ಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ.. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿದರು.

′ರಾಜ್ಯದ ಎಲ್ಲ ಯುವಸಮುದಾಯಗಳು ದುಶ್ಚಟಗಳಿಂದ ದೂರವಾಗುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್