LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಎಂ ಬದಲಾವಣೆ ಹೈ ಕಮಾಂಡ್ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಬ್ಬರೂ ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಕೊರೊನಾ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರಾಜ್ಯಾದ್ಯಂತ​ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿ ಪಕ್ಷ ಸಂಘ​ಟನೆ ಮಾಡಿದ್ದಾರೆ. ​ಮಾಸ್ ಲೀಡರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ​ಸಹ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಬ್ಬರೂ ಕಾಂಗ್ರೆಸ್ ನ ಎರಡೂ ಕಣ್ಣು ಇದ್ದ​ ಹಾಗೆ‌. ​ಸಿದ್ದರಾಮಯ್ಯನವರು ನಮ್ಮ ಪಕ್ಷ ಕೊಟ್ಟ ಮಾತಿನಂತೆ ಅತ್ಯಂತ ಸಮರ್ಥವಾಗಿ ಯೋಜನೆಗಳನ್ನು ಜಾರಿ ಮಾಡಿ ಸಮರ್ಥವಾಗಿ ಆಡಳಿತ ಮಾಡುತ್ತಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದರು.

ನಮ್ಮ ಪಕ್ಷದಲ್ಲಿ 136 ಜನ ಶಾಸಕರಿದ್ದಾರೆ. ಎಲ್ಲರ ಅಭಿಪ್ರಾಯ ತೆಗೆದುಕೊಂಡು ಒಳ್ಳೆಯ ಮುಖ್ಯಮಂತ್ರಿಯನ್ನು ನೇಮಕ ಮಾಡಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೆ ಅಂತಿಮ. ಈಗಾಗಲೇ ಸಿದ್ದರಾಮಯ್ಯನವರು ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ ಆಶ್ವಾಸನೆಯನ್ನು ಈಡೇರಿಸಿ ಮುಂದೆ ಹೋಗುತ್ತಿದ್ದೇವೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ