LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಿಎಂ, ಸಚಿವರು, ಶಾಸಕರ ವೇತನ ಮತ್ತು ಭತ್ಯೆ ಹೆಚ್ಚಳ!

ಬೆಂಗಳೂರು, ಮಾರ್ಚ್ 21: ಕರ್ನಾಟಕ ಸರ್ಕಾರವು (Karnataka Govt) ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರ (MLAs Salary) ವೇತನವನ್ನು ಶೇ 100 ರಷ್ಟು ಹೆಚ್ಚಿಸಲು ಮುಂದಾಗಿದ್ದು, ಈ ಪ್ರಸ್ತಾವಕ್ಕೆ ರಾಜ್ಯಪಾಲರಿಂದ (Karnataka Governor) ಅನುತಿಯೂ ದೊರೆತಿದೆ. ಕಲಾಪ ವ್ಯವಹಾರಗಳ ಸಲಹಾ ಸಮಿತಿಯ ನಿರ್ಣಯದಂತೆ ‘ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2025’ ಮತ್ತು ‘ಕರ್ನಾಟಕ ಶಾಸಕಾಂಗ ಸದಸ್ಯರ ವೇತನ, ಪಿಂಚಣಿ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2025’ ಕ್ಕೆ ರಾಜ್ಯಪಾಲರ ಅನುಮತಿ ಪಡೆಯುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ತಿದ್ದುಪಡಿ ಮಸೂದೆಯನ್ನು ವಿಧಾನಸಭೆ ಹಾಗೂ ಪರಿಷತ್​​ನಲ್ಲಿ ಸರ್ಕಾರ ಮಂಡಿಸಲಿದ್ದು ಅನುಮೋದನೆ ಪಡೆಯಲಿದೆ. ಪರಿಣಾಮವಾಗಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರ ವೇತನ ಮತ್ತು ಭತ್ಯೆಗಳಲ್ಲಿ ಹೆಚ್ಚಳವಾಗಲಿದೆ.









ಎಷ್ಟು ಹೆಚ್ಚಾಗಲಿದೆ ಸಿಎಂ, ಸಚಿವರ ವೇತನ?


ಸಿಎಂ ವೇತನ ತಿಂಗಳಿಗೆ 1.5 ಲಕ್ಷ ರೂ.ಗೆ ಏರಿಕೆಯಾಗಲಿದ್ದು, ಇದು ಶೇ 100 ರ ಹೆಚ್ಚಳವಾಗಿರಲಿದೆ. ಸಚಿವರ ವೇತನ 1.25 ಲಕ್ಷ ರೂ.ಗೆ ಏರಿಕೆಯಾಗಲಿದೆ. ಶಾಸಕರು ಹಾಗೂ ವಿಪಕ್ಷ ನಾಯಕರ ವೇತನ 80 ಸಾವಿರ ರೂ.ಗೆ ಏರಿಕೆಯಾಗಲಿದೆ. ಸಚಿವರ ಮನೆ ಬಾಡಿಗೆ ಭತ್ಯೆ 2.50 ಲಕ್ಷ ರೂ.ಗೆ ಹೆಚ್ಚಾಗಲಿದೆ.

ಶಾಸಕರು ಸೇರಿದಂತೆ ಯಾರ ವೇತನ ಎಷ್ಟು ಹೆಚ್ಚಳ?


ಶಾಸಕರ ವೇತನ 40 ಸಾವಿರ ರೂ.ನಿಂದ 80 ಸಾವಿರ ರೂ.ಗೆ ಹೆಚ್ಚಳವಾಗಲಿದೆ. ಅದರ ಜತೆಗೆ ವಿಧಾನಸಭಾಧ್ಯಕ್ಷ ಮತ್ತು ವಿಧಾನಪರಿಷತ್‌ ಸಭಾಪತಿ ವೇತನ 75 ಸಾವಿರ ರೂ.ನಿಂದ 1.25 ಲಕ್ಷ ರೂ, ಸಿಎಂ ವೇತನ 75 ಸಾವಿರ ರೂ.ನಿಂದ 1.50 ಲಕ್ಷ ರೂ., ಸಚಿವರ ವೇತನ 60 ಸಾವಿರ ರೂ.ನಿಂದ 1.25 ಲಕ್ಷ ರೂ. ವರೆಗೆ ಹೆಚ್ಚಳವಾಗಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್