LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕ್ರೀಡಾ, ಪರಿಶಿಷ್ಟ ಪಂಗಡಗಳ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್​​​

ಬೆಂಗಳೂರು, ಜೂನ್​ 19: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ತಲೆದಂಡವಾಗಿದೆ. ಸಚಿವ ಬಿ. ನಾಗೇಂದ್ರ  ರಾಜಿನಾಮೆ ನೀಡುತ್ತಿದ್ದಂತೆ ಇವರು ನೋಡಿಕೊಳ್ಳುತ್ತಿದ್ದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ಬಳಿಯೇ ಇವೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ಇಲಾಖೆ ಪ್ರಗತಿ ಪರೀಶಲನಾ ಸಭೆ ನಡೆಸಿದರು.

ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ, ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸದ್ದಕ್ಕೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು.

ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್​ಗಳಿಗೆ ಇಷ್ಟೆಲ್ಲ ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ? ಈ ಬಗ್ಗೆ ನಿರಂತರ ನಿಗಾ ಏಕೆ ವಹಿಸುತ್ತಿಲ್ಲ? ಫಲಿತಾಂಶದಲ್ಲಿ ಏರಿಕೆ ಏಕೆ ಆಗುತ್ತಿಲ್ಲ ಎಂದು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

ನಿಯಮಿತವಾಗಿ ಹಾಸ್ಟೆಲ್​ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು. ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್