LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿನ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಯುತ್ತಿರುವ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಬಕ್ರೀದ್ ಹಬ್ಬದ ಶುಭ ಕೋರಿದರು. ಈ ವೇಳೆ ಸಚಿವ ಜಮೀರ್ ಅಹಮದ್ ಉಪಸ್ಥಿತರಿದ್ದರು. ಇದೇ ವೇಳೆ, ಮುಸ್ಲಿಂ ಮುಖಂಡರು ಮುಸಲ್ಮಾನರ ಅಮಾಮ್ ಶಾಲು, ಟೋಪಿ, ಹಾಕಿ ಸಿಎಂಗೆ ಸನ್ಮಾನಿಸಿದರು.

ಬಳಿಕ ಮುಸಲ್ಮಾನ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ''ಇವತ್ತು ಇಡೀ ಭಾರತದಲ್ಲಿ ಬಕ್ರೀದ್ ಹಬ್ಬದ ಆಚರಣೆ ಮಾಡಲಾಗುತ್ತಿದೆ. ನೀವೆಲ್ಲರೂ ಮನುಕುಲಕ್ಕೆ ಒಳ್ಳೆಯದಾಗಲಿ ಅಂತ ಪ್ರಾರ್ಥನೆ ಮಾಡಿದ್ದೀರಿ. ಈ ಸಮಯದಲ್ಲಿ ನಾನು ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರುತ್ತೇನೆ. ಈದ್ ಉಲ್ ಅದಾ ತಿಳಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದೀರಿ. ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು'' ಎಂದು ಕರೆ ನೀಡಿದರು.

ನಾವು ಯಾವುದೇ ತಾರತಮ್ಯ ಮಾಡಲ್ಲ: ''ಇದು ಬಹುತ್ವದ ದೇಶ. ಎಲ್ಲಾ ಭಾಷೆ, ಧರ್ಮಕ್ಕೆ ಸಮಾನತೆ ಕೊಡುವ ದೇಶ. ಮನುಷ್ಯತ್ವ ಬಹಳ ದೊಡ್ಡ. ಎಲ್ಲರಲ್ಲೂ ಸಹಿಷ್ಣುತೆ ಬರಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳೆಸಬೇಕು. ಆಗ ರಾಷ್ಟ್ರ, ಸಮಾಜ ಏಳಿಗೆ ಆಗುತ್ತೆ. ನಾವು ಸಂವಿಧಾನದ ಮೇಲೆ ನಂಬಿಕೆ ಇಟ್ಟವರು. ನಾವು ಯಾವುದೇ ತಾರತಮ್ಯ ಮಾಡಲ್ಲ. ರಾಜ್ಯದ 7 ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದು. ಈ‌ ಕೆಲಸವನ್ನು ನಾವು ತಾರತಮ್ಯ ಇಲ್ಲದೇ ಮಾಡುತ್ತೇವೆ. ಅಲ್ಪಸಂಖ್ಯಾತರನ್ನು ಸಮಾನರನ್ನಾಗಿ ನೋಡುವ ಮನೋಭಾವ ನಮ್ಮದು. ಈ ವರ್ಷ ಒಳ್ಳೆಯ ಮಳೆ, ಬೆಳೆ ಆಗಲಿ ಎಂದು ಆಶಿಸುತ್ತೇನೆ ಎಂದು ಹಾರೈಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ