LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರಜ್ವಲ್ ವಿದೇಶಕ್ಕೆ ಹೋಗುವುದರ ಹಿಂದೆ ದೇವೇಗೌಡರ ಪ್ಲ್ಯಾನ್ ಇದೆ: ಸಿಎಂ ಸಿದ್ದರಾಮಯ್ಯ

ಯಾದಗಿರಿ01: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​​ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್​ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿದೇಶಕ್ಕೆ ಹೋಗುವವರಿಗೆ ವೀಸಾ ಕೊಡುವುದು ಯಾರು ಕೇಂದ್ರದ ಬಿಜೆಪಿಯವರೇ ತಾನೇ ಎಂದರು, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್​ಗೂ ಯಾವುದೇ ಸಂಬಂಧ ಇಲ್ಲ ಎಂದರು.

ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್​ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಪ್ರಶ್ನಿಸಿದರು.

ಪೆನ್​ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್​​ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್​ಗೆ ಟಿಕೆಟ್​ ಕೊಟ್ಟರು, ಪ್ರಕರಣದ ತನಿಖೆಗೆ ಎಸ್​​ಐಟಿ ರಚನೆ ಮಾಡಲಾಗಿದೆ. ಎಸ್​ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ