LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಜರಾಯಿ ದೇಗುಲಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ರದ್ದತಿಗೆ ಸಿಎಂ ಸೂಚನೆ?

ಬಾಗಲಕೋಟೆ , (ಅಕ್ಟೋಬರ್.13): ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲಾ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ  ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆಪತ್ರ ಬರೆದಿದ್ದಾರೆ. ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಈ ಪ್ರತ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಕಳುಹಿಸಿ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದ್ದಾರೆ.

ಇನ್ನು ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಬಹಿರಂಗವಾಗಿ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್​ ಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್​ ಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಹೀಗಾಗಿ ಸರ್ಕಾರಿ ಸ್ಥಳಗಳಲ್ಲಿ ಆರ್​​ ಎಸ್​ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಬೀಳುವುದು ಸಾಧ್ಯತೆಗಳಿವೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST