LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸಾನ್ವಿಕ  ನಿರ್ಮಿಸಿ ನಿರ್ದೇಶನದ ಜೊತೆಗೆ  ನಾಯಕಿಯಾಗಿರುವ ಚಿತ್ರ  ಜಾವ ಕಾಫಿ   



     ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಬಹಳ ಕಡಿಮೆ. ಈಗ ಆ ಸಾಲಿಗೆ ಸಾನ್ವಿಕ ಸೇರ್ಪಡೆಯಾಗಿದ್ದಾರೆ.

ಕೇರಳದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ.

     ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ,‌ ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ಅಜಯ್ ವರ್ಧನ್ ಈ ಚಿತ್ರದ ನಾಯಕರಾಗಿ ನಟಿಸಿದ್ದು, ಇತ್ತೀಚೆಗ‌ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ನೆರವೇರಿತು.

     "ಜಾವ ಕಾಫಿ' ಚಿತ್ರ ನನ್ನ ಕನಸು ಹಾಗೂ ನನ್ನ ಮನಸ್ಸು" ಎಂದು ಮಾತನಾಡಿದ  ಸಾನ್ವಿಕ‌ "ಚಿತ್ರ ನಿರ್ದೇಶನ ಮಾಡಬೇಕೆಂಬುದು ನನ್ನ ಹದಿನೈದು ವರ್ಷಗಳ ಕನಸು. ಈಗ ಅದು ನನಸಾಗಿದೆ. ನಾನು ಕೇರಳದವಳಾಗಿದ್ದರೂ ನನ್ನ‌ ಮೊದಲ ಚಿತ್ರವನ್ನು ಕನ್ನಡದಲ್ಲಿ ಮಾಡಿದ್ದೇನೆ.  ನಿರ್ದೇಶಕಿ, ನಿರ್ಮಾಪಕಿ, ನಾಯಕಿ, ಕಥೆ, ಚಿತ್ರಕಥೆ, ಸಾಹಸ ನಿರ್ದೇಶನ‌ ಸೇರಿದಂತೆ ಈ ಚಿತ್ರದ ಒಂಭತ್ತು ಆಯಾಮಗಳಲ್ಲಿ ಕೆಲಸ ಮಾಡಿದ್ದೇನೆ. ಕನ್ನಡದಲ್ಲಿ ನಿರ್ದೇಶನ ಮಾಡಲು ನನಗೆ ಅಸೋಸಿಯೇಟ್ ಡೈರೆಕ್ಟರ್ ವಸಂತ್ ಸಹಾಯ ಮಾಡಿದರು. 'ಜಾವ ಕಾಫಿ' ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಬೆಂಗಳೂರು, ಮಂಗಳೂರು,‌ ಕೇರಳ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಚಿತ್ರದ ಮೊದಲ ಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಆನಂತರ ಬಿಡುಗಡೆ ದಿನಾಂಕ ತಿಳಿಸುತ್ತೇವೆ. ಮೊದಲು ಕನ್ನಡದಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ. ಆನಂತರ ಪ್ಯಾನ್ ಇಂಡಿಯಾ ಚಿತ್ರವಾಗಿ ಎಲ್ಲಾ ಭಾಷೆಗಳಲ್ಲೂ ರಿಲೀಸ್ ಮಾಡುತ್ತೇವೆ" ಎಂದರು.

     "ಈಗಾಗಲೇ ತುಳು ಚಿತ್ರದಲ್ಲಿ ನಟಿಸಿರುವ ನನಗೆ ಇದು ಮೂರನೇ ಚಿತ್ರ. ಸಾನ್ವಿಕ ಅವರು‌ ಒಂದೊಳ್ಳೆ ಚಿತ್ರ ಮಾಡಿದ್ದಾರೆ. ನಾನು ಪತ್ರಕರ್ತನ ಪಾತ್ರ ಮಾಡಿದ್ದೇನೆ" ಎಂದು ನಾಯಕ ಅಜಯ್ ವರ್ಧನ್ ತಿಳಿಸಿದರು.

      ಚಿತ್ರದಲ್ಲಿ ನಟಿಸಿರುವ ಮಂಜುನಾಥ್, ಪ್ರತಿಮ, ‌ಭವಾನಿ ಶಂಕರ್, ವಿಜಯ್ ಕುಮಾರ್, ರಾಮಚಂದ್ರ, ರಾಮಲಿಂಗಪ್ಪ ಹಾಗೂ ಹಿನ್ನೆಲೆ ಸಂಗೀತ ನೀಡಿದ್ದಾರೆ ಹದಿನೆಂಟು ವಯಸ್ಸಿನ ಯುವಕ ಧ್ರುವ ದೇವರಾಯನ್, ನೃತ್ಯ ನಿರ್ದೇಶಕ ಪಾಲಾಶ್ ಮಾಸ್ಟರ್ ಸೇರಿದಂತೆ ಚಿತ್ರತಂಡದ ಸದಸ್ಯರು 'ಜಾವ ಕಾಫಿ' ಚಿತ್ರದ ಬಗ್ಗೆ ಮಾತನಾಡಿದರು. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀಧರ್ ಕರ್ಕೇರ ಸಂಗೀತ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ