LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ








ಬಳ್ಳಾರಿ,ಮೇ 24ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ: ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ.

ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸಲು ಹೊಸದಾದ ಸಮೀಕ್ಷೆಯನ್ನು ನಡೆಸಲು ದಿನಾಂಕ: 27-03-2025 ರ ಆಯೋಗದ ಮಧ್ಯಂತರ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾದ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ದಿನಾಂಕ: 05-05-2025 ರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವುದರ ಮೂಲಕ ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿರುತ್ತದೆ.

ಜಿಲ್ಲಾ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳಿಂದ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.

ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯು ದಿನಾಂಕ:26-05-2025 ರಿಂದ 29-05-2025 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) - 03 ದಿನಗಳ ಕಾಲ - ಮೇ 30, 31 ಹಾಗೂ 01 ನೇ ಜೂನ್ -2025 ರವರೆಗೆ ಮರು ನಿಗದಿಪಡಿಸಲಾಗಿದೆ ಮತ್ತು ಆನ್ ಲೈನ್ ಮೂಲಕ ಸ್ವಯಂ ಘೋಷಣೆ- ದಿನಾಂಕ: 01-06-2025 ರವರೆಗೆ ಮುಂದುವರೆಯಲಿದೆ ಎಂದು ಏಕ ಸದಸ್ಯ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್