LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೆಳಗಾವಿ ವಿಭಾಗ ಮಟ್ಟದ ಉದ್ಯೋಗ ಮೇಳ ಆಯೋಜನೆಗೆ ತೀರ್ಮಾನ: ಕಾಂತಾ ನಾಯಕ

ಧಾರವಾಡ:25 : ಬೆಳಗಾವಿ ವಿಭಾಗ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡುವ ಕುರಿತು ಚರ್ಚೆ ಮಾಡಲಾಗುತ್ತಿದ್ದು, ಅಗತ್ಯ ಮಾಹಿತಿಯನ್ನು ಪಡೆದುಕೊಂಡು ಶೀಘ್ರದಲ್ಲೇ ಉದ್ಯೋಗ ಮೇಳ ಆಯೋಜಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಅವರು ಹೇಳಿದರು. 
ಇಂದು ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಪ್ರಗತಿ‌ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಹುಬ್ಬಳ್ಳಿ ಧಾರವಾಡ ನಗರಗಳು ಕೈಗಾರಿಕಾ ಮತ್ತು ವಿದ್ಯಾ ಕೇಂದ್ರಗಳಾಗಿವೆ. ಸಾಕಷ್ಟು ಕೈಗಾರಿಕೆಗಳು ಹುಬ್ಬಳ್ಳಿ ಧಾರವಾಡಗಳಲ್ಲಿವೆ. ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಬಹಳ ಮುಖ್ಯವಾಗಿದೆ. ಅರ್ಹ ಅಭ್ಯರ್ಥಿಗಳು ಕೆಲಸ ಸಿಗದೇ ನಿರಾಶರಾಗಬಾರದು. ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಬೇಕು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಕೈಗಾರಿಕೋದ್ಯಮಿಗಳ ಸಭೆ ಜರುಗಿಸಲಾಗುವುದು. ಕೈಗಾರಿಕೆಗಳಲ್ಲಿ ಅವಶ್ಯಕವಾಗಿರುವ ಕೌಶಲ್ಯಗಳನ್ನು ಅಭ್ಯರ್ಥಿಗಳಿಗೆ ತರಬೇತಿ ನೀಡಲು ಕ್ರಮ ವಹಿಸಬೇಕು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಹೊಸ ಅಭ್ಯರ್ಥಿಗಳಿಗೆ ಕೆಲಸಕ್ಕೆ ಅನುಸಾರವಾಗಿ ವೇತನ ನೀಡಬೇಕಿದೆ. ಅಲ್ಲದೇ ಅಲ್ಪಾವಧಿ ಮತ್ತು ದೀರ್ಘಾವಧಿಯ ಕೆಲಸದ ಬಗ್ಗೆ ಮಾಹಿತಿ ಒದಗಿಸಬೇಕು. ಐಟಿಐ ವಿದ್ಯಾರ್ಹತೆ ಹೊಂದಿದವರಿಗೆ ಸಾಕಷ್ಟು ಉದ್ಯೋಗಾವಕಾಶಗಳು ದೊರೆಯುತ್ತಿವೆ. ಪದವೀಧರರಿಗೂ ಸಹ ಉದ್ಯೋಗಗಳು ದೊರೆಯುವಂತಾಗಬೇಕು. ಫ್ಯೂಚರ್ ಸ್ಕಿಲ್ ಯೋಜನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಬೇಕಿದೆ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಂತೆ ಕೌಶಲ್ಯ ತರಬೇತಿ ಮತ್ತು ಯೋಜನೆಗಳ ಸಾಧನೆಯ ವರದಿಯನ್ನು ನೀಡಬೇಕು. ಪಾರಂಪರಿಕ ಮತ್ತು ಪ್ರಾದೇಶಿಕ ಕಲೆಗಳು ನಶಿಸಿ ಹೋಗದಂತೆ ಕ್ರಮ ವಹಿಸಬೇಕು. ನನ್ನ ವೃತ್ತಿ ನನ್ನ ಆಯ್ಕೆ ಹಾಗೂ ಕಲಿಕೆಯೊಂದಿಗೆ ಕೌಶಲ್ಯ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ನಲ್ ಜಲ್ ಮಿತ್ರ ಯೋಜನೆಯಡಿ ತರಬೇತಿ ಪಡೆದವರು ಸ್ವಾವಲಂಬಿ ಜೀವನ ನಡೆಸುವಂತಾಗಬೇಕಿದೆ ಎಂದರು. 
ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿ, ಉದ್ಯೋಗ ಆಧಾರಿತ ತರಬೇತಿ ನೀಡುವುದು ಅಗತ್ಯವಿದೆ‌. ಆ ನಿಟ್ಟಿನಲ್ಲಿ ತರಬೇತಿ ಜೊತೆಗೆ ಗೌರವ ಸಂಭಾವನೆ ನೀಡಬೇಕಿದೆ. ಧಾರವಾಡದಲ್ಲಿ ಸಾಕಷ್ಟು ಅಭ್ಯರ್ಥಿಗಳು ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿದ್ದಾರೆ. ನವಲಗುಂದದ ಅಭಿಯಾನ ಫೌಂಡೇಶನ್ ಯೋಗ ಮ್ಯಾಟ್ ತಯಾರಿ ಕುರಿತು ತರಬೇತಿ ನೀಡಲು ಮುಂದಾಗಬೇಕು ಎಂದರು. 
ಇದೇ ಸಂದರ್ಭದಲ್ಲಿ ನಲ್ ಜಲ್ ಮಿತ್ರ ಯೋಜನೆಯಡಿ ತರಬೇತಿ ಪಡೆದ ಶಿಭಿರಾರ್ಥಿಗಳಿಗೆ ಪ್ರಮಾಣಪತ್ರ, ಟೂಲ್ ಕಿಟ್ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ  ದ್ಯಾಬೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು ಇತರರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್