LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಗೆ ಖಂಡನೆ

ಎಸ್‌ಯುಸಿಐ(ಸಿ) ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ಕೆ. ಉಮಾ ಅವರು ನೀಡಿರುವ ಹೇಳಿಕೆ


ಕೇಂದ್ರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗೃಹಬಳಕೆಯ ಅನಿಲ ಸಿಲಿಂಡರ್‌ಗೆ ರೂ. 60/ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್‌ಗೆ ರೂ. 114/ ಹೆಚ್ಚಳ ಮಾಡಿರುವ ಕ್ರಮವನ್ನು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ತೀವ್ರವಾಗಿ ಖಂಡಿಸುತ್ತದೆ.


ಅಮೆರಿಕಾ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ ನಡೆಸಿದ ಪರಿಣಾಮವಾಗಿ, ಭಾರತಕ್ಕೆ ಕಚ್ಚಾತೈಲ ಹಾಗೂ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದೇ ಈ ಬೆಲೆ ಏರಿಕೆಗೆ ಕಾರಣ ಎಂದು ಹೇಳಲಾಗಿದೆ.


ಆದರೆ ಈ ಕುರಿತು ಕೇಂದ್ರ ಬಿಜೆಪಿ ಸರ್ಕಾರವು ಕೆಲವು ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ. ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿಸುತ್ತಿದ್ದಾಗ, ಅದರ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಲಿಲ್ಲ ಏಕೆ? ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವಂತೆ ಅಮೆರಿಕಾ ಹಾಕಿದ ಒತ್ತಡಕ್ಕೆ ಮಣಿದಿರುವುದು ಯಾರ ಹಿತಾಸಕ್ತಿಗಾಗಿ? ಇನ್ನು 50 ದಿನಗಳಿಗೆ ಬೇಕಾದಷ್ಟು ಕಚ್ಚಾತೈಲ ಇದೆ ಎಂಬ ವರದಿ ಇರುವಾಗ ಹಳೆಯ ದರದಲ್ಲಿ ಖರೀದಿಸಿದ ಇದರ ಬೆಲೆ ಈಗಲೇ ಏರಿಕೆ ಮಾಡಿರುವುದು ಯಾಕಾಗಿ?

ಈಗಾಗಲೇ ಜನರ ಜೀವನ ವೆಚ್ಚ ಅತಿಯಾಗಿದೆ. ಅದೇ ಪ್ರಮಾಣದಲ್ಲಿ ವೇತನ ಹೆಚ್ಚಳ ಅಥವಾ ಉದ್ಯೋಗ ಸೃಷ್ಟಿ ಆಗಿಲ್ಲ. ದುಡಿಯುವ ಜನ ಸಾಲ ಮಾಡಿಯೇ ಬದುಕಬೇಕಾದ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಇಂಧನ ದರ ಹೆಚ್ಚಳ ಮಾಡಿದಲ್ಲಿ ಅದು ಇನ್ನಷ್ಟು ಹಣದುಬ್ಬರಕ್ಕೆ ಕಾರಣವಾಗಲಿದೆ ಎಂಬ ಕನಿಷ್ಠ ತಿಳಿವಳಿಕೆ ಈ ಸರ್ಕಾರಕ್ಕೆ ಇರಬೇಕು.


 ಯುದ್ಧದ ಸಂಕಷ್ಟದಲ್ಲೂ ಜನರನ್ನು ದೋಚಬೇಕೆಂಬ ಕೇಂದ್ರ ಸರ್ಕಾರದ ಈ ಅಮಾನವೀಯ ಧೋರಣೆಯನ್ನು ಎಸ್‌ಯುಸಿಐ(ಸಿ) ಕಟುವಾಗಿ ವಿರೋಧಿಸುತ್ತದೆ. ತಕ್ಷಣವೇ ಈ ದರ ಏರಿಕೆಯನ್ನು ವಾಪಸ್ ಪಡೆಯಬೇಕು, ಕಚ್ಚಾತೈಲ ಖರೀದಿಗೆ ಪರ್ಯಾಯ ಮೂಲಗಳನ್ನು ತೀರ್ಮಾನಿಸುವ ಸಾರ್ವಭೌಮತ್ವವನ್ನು ಸರ್ಕಾರ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸುತ್ತದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್