LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಪಂಚ ನ್ಯಾಯಗಳಿಗೆ ಒತ್ತು ನೀಡಿದ ಕೈ ಪಡೆ!

ನವದೆಹಲಿಏಪ್ರಿಲ್​ 05 : ಮುಂಬರಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ(Manifesto)ಯನ್ನು ಬಿಡುಗಡೆ ಮಾಡಿದೆ. ಲೋಕಸಭೆ ಚುನಾವಣೆಯ ರಣಕಹಳೆ ಮೊಳಗುತ್ತಿದ್ದಂತೆಯೇ ಎಲ್ಲ ಪಕ್ಷಗಳು ಜನತೆಗೆ ಭರವಸೆಗಳ ಸರಮಾಲೆಯನ್ನೇ ನೀಡಲಾರಂಭಿಸಿವೆ. ಕಾಂಗ್ರೆಸ್ ಕೂಡ ಚುನಾವಣಾ ರ್ಯಾಲಿಗಳಲ್ಲಿ ಜನರಿಗೆ ಹಲವು ಭರವಸೆಗಳನ್ನು ನೀಡಿದೆ. ಈ ನಡುವೆ ಇಂದು ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ಪಕ್ಷವು  ಪಂಚ ನ್ಯಾಯ ಮತ್ತು 25 ಭರವಸೆಗಳನ್ನು ಭರವಸೆ ನೀಡಿದೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ‘ಯುವ ನ್ಯಾಯ’, ‘ನಾರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಹಿಸ್ಸೆದಾರಿ ನ್ಯಾಯ’ ಹಾಗೂ ಖಾತರಿಗಳು ಸೇರಿದಂತೆ ಪಂಚ ನ್ಯಾಯ ಅಥವಾ ನ್ಯಾಯದ ಐದು ಸ್ತಂಭಗಳಿಗೆ ಒತ್ತು ನೀಡಿದೆ.

ಕಾಂಗ್ರೆಸ್​ ಪಕ್ಷವು ದೇಶಾದ್ಯಂತ ಜಾತಿ ಆಧಾರಿತ ಜನಗಣತಿ ನಡೆಸುವುದಾಗಿ ಭರವಸೆ ನೀಡಿದೆ. 2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್​ ಸರ್ಕಾರ ರಚನೆಯಾದರೆ ಬಡ ಕುಟುಂಬದ ಮಹಿಳೆಯರಿಗೆ ಪ್ರತಿ ವರ್ಷ ಲಕ್ಷ ರೂ.ಗಳ ನೆರವು ನೀಡುವುದಾಗಿ ತಿಳಿಸಿದ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದರು.

ಯುವ ನ್ಯಾಯ ಅಡಿಯಲ್ಲಿ ಪಕ್ಷವು ಮಾತನಾಡಿರುವ ಐದು ಖಾತರಿಗಳಲ್ಲಿ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಭರವಸೆ ಮತ್ತು ಒಂದು ವರ್ಷದವರೆಗೆ ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮದಡಿಯಲ್ಲಿ ಯುವಕರಿಗೆ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಪ್ರತಿ ವರ್ಷ ಎಂಎಸ್‌ಪಿ ಘೋಷಿಸುವ ಕಾನೂನು ಖಾತರಿ ನೀಡುವುದಾಗಿ ಘೋ‍ಷಿಸಿದೆ.

ಕಾರ್ಮಿಕ ನ್ಯಾಯ ಅಡಿಯಲ್ಲಿ, ಕಾರ್ಮಿಕರಿಗೆ ಆರೋಗ್ಯದ ಹಕ್ಕನ್ನು ಒದಗಿಸುವುದು, ದಿನಕ್ಕೆ ಕನಿಷ್ಠ 400 ರೂ. ವೇತನ ಮತ್ತು ನಗರ ಉದ್ಯೋಗ ಖಾತರಿಯನ್ನು ಖಚಿತಪಡಿಸುವುದಾಗಿ ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ನಮ್ಮ ಪ್ರಣಾಳಿಕೆ ಬಡವರಿಗೆ ಮೀಸಲಾಗಿದೆ ಎಂದು ಖರ್ಗೆ ಹೇಳಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್