LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರಕೃತಿ ಸಂರಕ್ಷಣೆ ಮತ್ತು ಪೋಷಣೆ ನಮ್ಮೆಲ್ಲರ ಜವಾಬ್ದಾರಿ


ಬಳ್ಳಾರಿ,ಜೂ.06
ನಗರದ ಬಾಲ ಭಾರತಿ ಕೇಂದ್ರೀಯ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ‘ವನಮಹೋತ್ಸವ’ ಕಾರ್ಯಕ್ರಮವನ್ನು ಅತ್ಯಂತ ಸಡಗರ-ಸಂಭ್ರಮದಿAದ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಪ್ರಸನ್ನ.ಜಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವೆಲ್ಲರೂ ಪ್ರಕೃತಿಯಲ್ಲಿನ ಮರ-ಗಿಡಗಳನ್ನು ಹಾಗೂ ನದಿ-ಜಲಗಳನ್ನು ಸಂರಕ್ಷಿಸುವ ಮತ್ತು ಪೋಷಿಸುವ ಜವಾಬ್ದಾರಿಯನ್ನು ಹೊರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಅವರು ‘ಮನೆಗೊಂದು ಮರ, ಊರಿಗೊಂದು ವನ’ ಎಂಬ ಜನಪ್ರಿಯ ಘೋಷವಾಕ್ಯ ಸ್ಮರಿಸುತ್ತಾ, ಪರಿಸರ ಸಂರಕ್ಷಣೆಯ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು.
ವನಮಹೋತ್ಸವ ಅಂಗವಾಗಿ ಶಾಲೆಯ ಆವರಣದಲ್ಲಿ ವಿವಿಧ ಜಾತಿಯ ಉಪಯುಕ್ತ ಸಸಿಗಳನ್ನು ನೆಡಲಾಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪರಿಸರವನ್ನು ಉಳಿಸುವ ಮತ್ತು ಮರ-ಗಿಡಗಳನ್ನು ಸದಾ ಬೆಳೆಸಿ, ಪೋಷಿಸುವ ಜಾಗೃತಿಯ ‘ಹಸಿರು ಸಂಕಲ್ಪ' ತೊಟ್ಟರು.
ಇದೇ ಶುಭ ಸಂದರ್ಭದಲ್ಲಿ ಮಕ್ಕಳ ದೈಹಿಕ ವಿಕಾಸಕ್ಕಾಗಿ ಶಾಲಾ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾದ ಸುಸಜ್ಜಿತ ಆಟದ ಮೈದಾನವನ್ನು ಕಾರ್ಯದರ್ಶಿ ಪ್ರಸನ್ನ ಜಿ. ಅವರು ರಿಬ್ಬನ್ ಕತ್ತರಿಸುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್