LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಕೆಲಸ : ಶಾಸಕ ಪಾಟೀಲ 


ನೇಸರಗಿ. ಸರ್ಕಾರಿ ಶಾಲೆ, ಪ್ರೌಢ, ಕಾಲೇಜು, ಪದವಿ ಶಿಕ್ಷಣ ಅಭಿವೃದ್ಧಿಗೆ ಮತ್ತು ಬಡ ಜನರಿಗೆ, ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ನಿರಂತರ ಕೆಲಸ ಮಾಡುತ್ತೇನೆ ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.
    ಅವರು ಸಮೀಪದ ಹಣಬರಹಟ್ಟಿ ಗ್ರಾಮದಲ್ಲಿ ಶಾಲಾ ಶಿಕ್ಷಣ ಅಭಿವೃದ್ಧಿ ಯೋಜನೆಯಡಿಯಲ್ಲಿ ರೂ. 14 ಲಕ್ಷ 50 ಸಾವಿರ ರೂಪಾಯಿಗಳ ಅನುಧಾನದ ಶಾಲಾ ಕೊಠಡಿ ಉದ್ಘಾಟನೆ ಮತ್ತು ನೂತನವಾಗಿ ರೂ. 55 ಲಕ್ಷ ಗಳಲ್ಲಿ ನೂತನವಾಗಿ  ನಿರ್ಮಾಣ ನೆರವೇರಲಿರುವ ಅಯುಷ್ಮಾನ ಅರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ಈ ಭಾಗದ ಹಣಬರಹಟ್ಟಿ, ಮಾಸ್ತಮರ್ಡಿ, ಗಜಮನಾಳ, ಹೊಸಕೋಟಿ ಗ್ರಾಮದ ಜನರ ಅರೋಗ್ಯ ಸಂವರಕ್ಷಣೆ ದೃಷ್ಟಿಯಿಂದ ಅಯುಷ್ಮಾನ ಕೇಂದ್ರ ಸ್ಥಾಪನೆಗೆ ಆದ್ಯತೆ ನೀಡಿದ್ದು ಕಾಮಗಾರಿ ಮುಗಿದ ನಂತರ ಆಸ್ಪತ್ರೆಯ ಸದುಪಯೋಗ ಪಡೆಯಿರಿ ಎಂದರು.
   ಈ ಸಂದರ್ಭದಲ್ಲಿ ಯುವ ಮುಖಂಡ ಸಚಿನ ಪಾಟೀಲ,ಶಿವಾನಂದ ಕುಂಕುರ, ರಮೇಶ ಉಳವಿ, ಅಡಿವೆಪ್ಪ ಕೊಳದೂರ, ಶಿವಾನಂದ ಮಹಾಲಿಂಗಪುರ, ಮಂಜುನಾಥ ಕಾಳನಾಯ್ಕರ, ಸಂತೋಷ ಉಳವಿ, ಮಲ್ಲೇಶ ದಂಡಾಪುರ, ಕಾಶಿಮ್ ಜಮಾದಾರ, ಅಡಿವೆಪ್ಪ ಹಡಗಿನಹಾಳ, ಬಸವಣ್ಣೆಪ್ಪ ಗೌಡರ, ಈರಣ್ಣ ಬೀರಗಡ್ಡಿ, ಈರಣ್ಣ ಬಿಲ್,ವೀರೇಶ ಉಳವಿ, ಬಸವರಾಜ ಚಿಕ್ಕನಗೌಡ್ರ,ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷ / ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ವಿದ್ಯಾರ್ಥಿಗಳು, ಗ್ರಾಮದ ಮುಖಂಡರು, ಗ್ರಾಮಸ್ಥರು  ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್