LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರೈತರ ಮನವೊಲಿಸಿ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸಿ : ಸಿಇಓ ಬಾಲೆ

ಬಾಗಲಕೋಟೆ, ಜುಲೈ ೧4 : ಜಿಲ್ಲೆಯ ಹೆಚ್ಚಿನ ಸಂಖ್ಯೆಯ ರೈತರು ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯುವಂತೆ ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಿ, ರೈತರನ್ನು ಮನವೊಲಿಸಿ ಬೆಳೆವಿಮೆ ವ್ಯಾಪ್ತಿಗೆ ಒಳಡಿಸಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಬೆಳೆ ವಿಮೆ ಯೋಜನೆ ಅನುಷ್ಠಾನ ಕುರಿತು ಜರುಗಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಳೆ ಸಾಲ ಪಡೆದ ರೈತರಿಗೆ ಬೆಳೆ ವಿಮೆ ಕಡ್ಡಾಯವಾಗಿರುವ ಹಿನ್ನಲೆಯಲ್ಲಿ ಯಾವುದೇ ಅರ್ಹ ರೈತರು ವಿಮೆಯಿಂದ ವಂಚಿತರಾಗದಂತೆ ಬ್ಯಾಂಕುಗಳು, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಗ್ರಾಮ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆಯ ಮಹತ್ವ, ನೋಂದಣಿ ವಿಧಾನ, ಕೊನೆಯ ದಿನಾಂಕ ಹಾಗೂ ಯೋಜನೆಯ ಪ್ರಯೋಜನಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಬ್ಯಾಂಕುಗಳು ಬೆಳೆಸಾಲ ಮಂಜೂರು ಮಾಡುವ ಸಂದರ್ಭದಲ್ಲಿ ವಿಮೆ ನೋಂದಣಿ ಪ್ರಕ್ರಿಯೆಯನ್ನು ನಿಯಮಾನುಸಾರ ಪೂರ್ಣಗೊಳಿಸಬೇಕು. ಯೋಜನೆಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಜಿಲ್ಲೆಯಲ್ಲಿ ಶೇ.೧೦೦ ರಷ್ಟು ಅರ್ಹ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.
ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ನೀಡಿದ ಬೆಳೆಸಾಲ ಪಡೆದ ರೈತರನ್ನು ವಿಮೆ ವ್ಯಾಪ್ತಿಗೆ ಒಳಪಡಿಸುವ ಕಾರ್ಯವಾಗಬೇಕು. ಕಳೆದ ಸಾಲಿನ ಹಂಗಾಮಿನಲ್ಲಿ ೨೨ ಸಾವಿರಕ್ಕೂ ಹೆಚ್ಚು ರೈತರು ಬೆಳೆ ವಿಮೆಗೆ ಒಳಪಡಿಸಿದ್ದರು. ಈ ಹಂಗಾಮಿನಲ್ಲಿ ಅದಕ್ಕೂ ಹೆಚ್ಚು ವಿಮೆಗೆ ನೋಂದಣಿಗೆ ಕ್ರಮವಹಿಸಲು ಸೂಕ್ತ ನಿರ್ದೇಶನ ನೀಡಿದರು. ಪ್ರತಿಯೊಂದು ಬ್ಯಾಂಕ್‌ಗಳು ಸಾಲ ಪಡೆದಿರುವ ರೈತರನ್ನು ಮನವೊಲಿಸಿ ಬೆಳೆವಿಮೆ ನೋಂದಣಿಗೆ ಕ್ರಮವಹಿಸಲು ತಿಳಿಸಿದರು. ಈ ಬಗ್ಗೆ ಪ್ರತಿದಿನ ಪ್ರಗತಿಯ ಬಗ್ಗೆ ಗಮನ ಹರಿಸಲಾಗುವುದೆಂದು ತಿಳಿಸಿದು. 
ಕೃಷಿ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಮಾತನಾಡಿ ಹೆಸರು, ಸೋಯಾ ಅವರೆ ಹಾಗೂ ಉದ್ದು ಬೆಳೆಗೆ ವಿಮೆ ಕಂತು ಪಾವತಿಗೆ ಜುಲೈ ೧೫ ಕೊನೆಯ ದಿನವಾದರೆ, ಅರಿಶಿಣ, ಸೂರ್ಯಕಾಂತಿ, ಸಜ್ಜೆ, ಮುಸುಕಿನ ಜೋಳ, ಜೋಳ, ತೊಗರಿ, ಶೇಂಗಾ, ಎಳ್ಳು (ಮ.ಆ), ಕೆಂಪು ಮೆಣಸಿನಕಾಯಿ, ಮುಸುಕಿನ ಜೋಳ, ಸಜ್ಜೆ, ತೊಗರಿ, ಶೇಂಗಾ (ನೀರಾವರಿ) ಬೆಳೆಗಳಿಗೆ ಜುಲೈ ೩೧ ಹಾಗೂ ಸೂರ್ಯಕಾಂತಿ, ಈರುಳ್ಳಿ (ನೀರಾವರಿ), ಈರುಳ್ಳಿ, ಕೆಂಪು ಮೆಣಸಿನಕಾಯಿ (ಮ.ಆ) ಬೆಳೆಗಳಿಗೆ ವಿಮೆ ಕಂತು ಪಾವತಿಗೆ ಆಗಸ್ಟ ೧೪ ಆಗಿರುತ್ತದೆ ಎಂದು ತಿಳಿಸಿದರು. 
ಈ ಸಂದರ್ಭದಲ್ಲಿ ವಿವಿಧ ಬೆಳೆ ವಿಮೆಯ ಪ್ರಚಾರದ ಪೋಸ್ಟರಗಳನ್ನು ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಬಿಡಿಸಿಸಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಸಿದ್ದನಗೌಡ ನೀಲಪ್ಪನವರ, ಜಿಲ್ಲಾ ಅಗ್ರಣಿ ಬ್ಯಾಂಕ್‌ನ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಸಹಕಾರ ಇಲಾಖೆಯ ಉಪನಿಬಂಧಕ ದಾನಯ್ಯ ಹಿರೇಮಠ ಸೇರಿದಂತೆ ವಿವಿಧ ರಾಷ್ಟ್ರೀಕೃತ ಬ್ಯಾಂಕ್ ಶಾಖಾ ವ್ಯವಸ್ಥಾಪಕರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್