LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜೂನ್‌ 6ಕ್ಕೆ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್-ರಿಸರ್ಚ್ ಕಾಲೇಜಿನಲ್ಲಿ  ಘಟಿಕೋತ್ಸವ


ಬೆಳಗಾವಿ: ಇಲ್ಲಿನ ಉದ್ಯಮಬಾಗದಲ್ಲಿರುವ ಪ್ರಸಿದ್ಧ ತಾಂತ್ರಿಕ ಸಂಸ್ಥೆಯಾದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ರಿಸರ್ಚ್ (JCER) ಕಾಲೇಜಿನ ಘಟಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಸರ್ಟಿಫಿಕೇಟ್ ವಿತರಣೆ ಸಮಾರಂಭವನ್ನು ಜೂನ್ 06 ರ ಶನಿವಾರ ಆಯೋಜಿಸಲಾಗಿದೆ ಎಂದು ಜೆಸಿಇಆರ್‌ನ ಪ್ರಾಚಾರ್ಯ ಮತ್ತು ನಿರ್ದೇಶಕರಾದ ಡಾ. ಎಸ್.ವ್ಹಿ. ಗೋರಬಾಳ ಅವರು ತಿಳಿಸಿದರು.

ನಗರದ ಕಾಲೇಜು ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 06 ರಂದು ಬೆಳಗ್ಗೆ 10:00 ಗಂಟೆಗೆ ಈ ಪ್ರತಿಷ್ಠಿತ ಕಾರ್ಯಕ್ರಮವು ಆರಂಭವಾಗಲಿದೆ. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆದ ಡಾ. ಪ್ರಸಾದ್ ರಾಂಪುರೆ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ವಾಹಿನಿಯ ಮುಖ್ಯ ಸಂಪಾದಕರಾದ ಅಜಿತ್ ಹನಮಕ್ಕನವರ್ ಅವರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಈ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಗಳು ಈಗಾಗಲೇ ಎನ್‌ಬಿಎ ಮಾನ್ಯತೆ ಪಡೆದುಕೊಂಡಿವೆ. ಪ್ರಸಕ್ತ ಸಾಲಿನಲ್ಲಿ ವಿವಿಧ ವಿಭಾಗಗಳಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಿದ ಒಟ್ಟು 260 ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಅಧಿಕೃತವಾಗಿ ಪದವಿ ಪ್ರದಾನ ಮಾಡಲಾಗುವುದು ಎಂದು ಅವರು ವಿವರಿಸಿದರು.

ಶನಿವಾರ ನಡೆಯಲಿರುವ ಈ ಘಟೀಕೋತ್ಸವ ಹಾಗೂ ಪದವಿ ಪ್ರಮಾಣಪತ್ರ ವಿತರಣೆ ಸಮಾರಂಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಾಂಶುಪಾಲರು ಕರೆ ನೀಡಿದರು.

ಈ ಸುದ್ದಿಗೋಷ್ಠಿಯಲ್ಲಿ  ಡಾ. ಪ್ರಕಾಶ ಸೋನವಾಲಕರ್, ನಿವೃತ್ತ ಕರ್ನಲ್ ಜಾನಿ ಹಾಗೂ ಡಾ. ಜ್ಯೋತಿ ಬಿ.ಆರ್ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್