LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹತ್ತಿ, ತೊಗರಿ ಬೇಸಾಯ ಕ್ರಮಗಳು: ಹೊರಾವರಣ ತರಬೇತಿ


ಕೊಪ್ಪಳ ಜೂನ್ 19 ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕೊಪ್ಪಳ ಮತ್ತು ಸಹಾಯಕ ಕೃಷಿ ನಿರ್ದೇಶಕರು ಕೊಪ್ಪಳ ಇವರ ಸಹಯೋಗದಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಲ್ಲಿ ಸುರಕ್ಷಿತ ಕೀಟನಾಶಕ ಬಳಕೆ ಹಾಗೂ ಸಮತೋಲಿತರಸಗೊಬ್ಬರ ಬಳಕೆ ಕುರಿತು ಅಳವಂಡಿ ಹೋಬಳಿಯ ಬಿಕನಹಳ್ಳಿ ಗ್ರಾಮದಲ್ಲಿ ಹೊರಾವರಣತರಬೇತಿ ಏರ್ಪಡಿಸಲಾಗಿತ್ತು.
 ಅಧಿಕ ಸಾಂದ್ರತೆ ಹತ್ತಿ ಬೇಸಾಯ ಹಾಗೂ ತೊಗರಿ ಬೆಳೆಯ ನಿರ್ವಹಣೆ ಕುರಿತು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ.ಬದರಿ ಪ್ರಸಾದ್ ಪಿ.ಆರ್. ಅವರು ಸಮಗ್ರ ಮಾಹಿತಿ ನೀಡಿದರು. ಅಲ್ಲದೇ ಬರ ಭೂಮಿ ಬೆಳೆಯಾದ ಗೋಡಂಬಿಯ ಕುರಿತು ಮಾಹಿತಿ ನೀಡಿದರು.
 ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರಾದ ಜೀವಂತ ಸಾಬ್ ಅವರು, ರೈತರಿಗೆ ಬೀಜೋಪಚಾರ ಮಹತ್ವ ಪರ್ಯಾಯ ರಸಗೊಬ್ಬರಗಳ ಬಗ್ಗೆ ಮಾಹಿತಿ ನೀಡಿದರು.
 ಸಹಾಯಕ ತೋಟಗಾರಿಕಾ ಅಧಿಕಾರಿರಾದ ಆರಿಫ್ ಅವರು, ಕೃಷಿ ಮತ್ತು ತೋಟಗಾರಿಕಾ ಪದ್ಧತಿಯ ಬಗ್ಗೆ ಮಾಹಿತಿ ಕೊಟ್ಟರು.
 ಕೋರಮಂಡಲ ಇಂಟರ್ನ್ಯಾಷನಲ್ ಅಧಿಕಾರಿ ಅವಿನಾಶ್ ಅವರು, ನ್ಯಾನೋ ರಸಗೊಬ್ಬರಗಳ ಹಾಗೂ ಡ್ರೋನ್ ಬಳಕೆಯ ಬಗ್ಗೆ ರೈತರಿಗೆ ಅರಿವು ಮೂಡಿಸಿದರು.
 ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿಗಳಾದ ಪ್ರತಾಪಗೌಡ, ಮಾರುತಿ, ತಾಂತ್ರಿಕ ವ್ಯವಸ್ಥಾಪಕೆಯವರಾದ ತಾರಾ ಹಾಗೂ ನೂರಾರು ರೈತರು ಭಾಗವಹಿಸಿದ್ದರು.
 ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದ ವಿಜ್ಞಾನಿಗಳನ್ನು (ಡಾ. ಬದರಿ ಪ್ರಸಾದಪಿ.ಆರ್., ವಿಸ್ತರಣಾ ಮುಂದಾಳು ಮೊ. ನಂ: 9900145705) ಸಂಪರ್ಕಿಸಬಹುದು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್