LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ!

ಬೆಂಗಳೂರು,27: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಎಲ್ಲಾ 15 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣ ಸಂಬಂಧ ಸುಧೀರ್ಘ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಾಧೀಶರಾದ ಮುರಳೀಧರ ಪೈ ಗುರುವಾರ ಪ್ರಕಟಿಸಿದ್ದಾರೆ.

ಸಾಕ್ಷ್ಯಧಾರಗಳ ಕೊರತೆಯಿಂದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಕರಣದಲ್ಲಿ ಒಟ್ಟು 19 ಮಂದಿ ಆರೋಪಿಗಳಿದ್ದರು. ಅವರ ಪೈಕಿ ವಿಚಾರಣೆ ಹಂತದಲ್ಲಿಯೇ ಆರೋಪಿಗಳಾಗಿದ್ದ ಓಬಳರಾಜು, ರುದ್ರಪ್ಪ ಮತ್ತು ರಂಗನಾಥ್‌ ಅವರ ವಿರುದ್ಧದ ಆರೋಪಗಳನ್ನು ಕೈ ಬಿಡಲಾಗಿತ್ತು. ಎರಡನೇ ಆರೋಪಿಯಾಗಿದ್ದ ಶಿವಕುಮಾರಯ್ಯ ಅಲಿಯಾಸ್‌ ಗುರೂಜಿ ವಿಚಾರಣಾ ಹಂತದಲ್ಲಿಯೇ ಸಾವನ್ನಪ್ಪಿದ್ದರು. ಹೀಗಾಗಿ, ಅವರ ವಿರುದ್ಧದ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿತ್ತು. ಉಳಿದಂತೆ ಕುಮಾರಸ್ವಾಮಿ, ಈರಮಲ್ಲಯ್ಯ, ಸಂತೋಷ್‌ ಅಗಸಿಮನಿ, ಕೆ ಎಂ ಮುರಳೀಧರ ಮತ್ತು ಅನಿಲ್‌ ಕುಮಾರ್‌ ಸೇರಿದಂತೆ 15 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಗುರುವಾರ ತೀರ್ಪು ಪ್ರಕಟಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್