LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​​ಗೆ ಕೋರ್ಟ್​ ಸಮನ್ಸ್

ಬೆಂಗಳೂರು, : ರಾಹುಲ್ ಗಾಂಧಿ ವಿರುದ್ದ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್​ ಸಮನ್ಸ್ ನೀಡಿದೆ.

ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್​ ಹೆರಾಲ್ಡ್​ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ಇಡಿ (ಜಾರಿ ನಿರ್ದೇಶನಾಲಯ) ರಾಹುಲ್​ ಗಾಂಧಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು. ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿದ್ದಾರೆಂದು 2022ರಲ್ಲಿ ವಿಲ್ಸನ್​​​ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿತ್ತು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST