LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ: ಹೊಸ ಅಧ್ಯಯನ

ನವದೆಹಲಿ,16:  ಕೊರೋನಾ ವೈರಸ್‌ ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌ ಲಸಿಕೆ ಅಡ್ಡಪರಿಣಾಮ ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ.

ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ. ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ.

ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕಿಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ ಎಂದು ಹೇಳಲಾಗಿದೆ.

‘ಹೊಸ-ಆರಂಭದ ಚರ್ಮ ಮತ್ತು ಸಬ್ಕ್ಯುಟೇನಿಯಸ್ ಅಸ್ವಸ್ಥತೆ’ 10.5 ಪ್ರತಿಶತ ಹದಿಹರೆಯದವರಲ್ಲಿ ಕಂಡುಬಂದಿದ್ದು, ಸಾಮಾನ್ಯ ಅಸ್ವಸ್ಥತೆ ಅಂದರೆ ಸಾಮಾನ್ಯ ಸಮಸ್ಯೆ 10.2 ಪ್ರತಿಶತ, ನರಮಂಡಲದ ಅಸ್ವಸ್ಥತೆ ಅಂದರೆ ನರ ಸಂಬಂಧಿತ ಸಮಸ್ಯೆ 4.7 ಪ್ರತಿಶತ. ಅದೇ ರೀತಿ ಶೇ.8.9ರಷ್ಟು ಯುವಜನರಲ್ಲಿ ಸಾಮಾನ್ಯ ಸಮಸ್ಯೆಗಳು, ಮಸ್ಕ್ಯುಲೋಸ್ಕೆಲಿಟಲ್ ಡಿಸಾರ್ಡರ್ಸ್ ಅಂದರೆ ಸ್ನಾಯುಗಳು, ನರಗಳು, ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಶೇ.5.8ರಷ್ಟು ಮತ್ತು ನರವ್ಯೂಹಕ್ಕೆ ಸಂಬಂಧಿಸಿದ ಸಮಸ್ಯೆಗಳು ಶೇ.5.5ರಲ್ಲಿ ಕಂಡುಬರುತ್ತವೆ ಎನ್ನಲಾಗಿದೆ.

ಇನ್ನು ಕೋವಾಕ್ಸಿನ್ ಅಡ್ಡಪರಿಣಾಮಗಳು ಯುವತಿಯರಲ್ಲಿಯೂ ಕಂಡುಬಂದಿದ್ದು, 4.6 ರಷ್ಟು ಮಹಿಳೆಯರಲ್ಲಿ ಮುಟ್ಟಿನ ಸಮಸ್ಯೆಗಳು ವರದಿಯಾಗಿವೆ ಮತ್ತು 2.7 ಪ್ರತಿಶತದಷ್ಟು ಮಹಿಳೆಯರಲ್ಲಿ ಕಣ್ಣಿನ ಸಮಸ್ಯೆಗಳನ್ನು ತೋರಿಸಿದೆ. 0.6 ರಷ್ಟು ಜನರಲ್ಲಿ ಹೈಪೋಥೈರಾಯ್ಡಿಸಮ್ ಕಂಡುಬಂದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್