LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು.ರಾಮನಗರ, (ಅಕ್ಟೋಬರ್ 23): ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್​ ಅಭ್ಯರ್ಥಿ ಯಾರು ಎನ್ನುವುದು ಬಹಿರಂಗವಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ನಡೆದಂತೆ, ಕುಮಾರಸ್ವಾಮಿ ಹೇಳಿದಂತೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಇಂದು (ಅಕ್ಟೋಬರ್ 23) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​ ಸಮ್ಮುಖದಲ್ಲಿ ಯೋಗೇಶ್ವರ್​ ಅಧಿಕೃತವಾಗಿ ಕಾಂಗ್ರೆಸ್ ಮನೆ ಸೇರಿದರು. ಈ ಮೂಲಕ ಯೋಗೇಶ್ವರ್​, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್​ನಿಂದ ಕಣಕ್ಕಿಳಿಯುವುದು ಖಚಿತವಾಗಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST