LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕ್ರೇಜಿಸ್ಟಾರ್  ರವಿಚಂದ್ರನ್ ಶುಭ ಹಾರೈಸಿದ ಕವಳ







      ರಾಧಾಕೃಷ್ಣ ಆರ್ಟ್ಸ್ ಹಾಗೂ ಡ್ರೀಮ್ ವರ್ಲ್ಡ್ ಸಿನಿಮಾಸ್ ಮೂಲಕ ಲೋಕೇಶ್ ಬಿ. ಹಾಗೂ ಅಡವಯ್ಯ ಪೂಜಾರ್ ಅವರ ನಿರ್ಮಾಣದ 'ಕವಳ'  ಚಿತ್ರದ  ಮುಹೂರ್ತ ಸಮಾರಂಭ ನಗರದ ಕಾಡು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ  ಅದ್ದೂರಿಯಾಗಿ ನೆರವೇರಿತು.

     ಮುಖ್ಯ ಅತಿಥಿಯಾಗಿ ಆಗಮಿಸಿದ್ದ  ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕವಳ ಚಿತ್ರಕ್ಕೆ ಚಾಲನೆ ನೀಡಿ  ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಹಿಂದೆ  ಆರ್.ಎಕ್ಸ್.ಸೂರಿ, ಭೈರಾದೇವಿ ಚಿತ್ರಗಳನ್ನು ನಿರ್ದೇಶಿಸಿದ್ದ  ಶ್ರೀ ಜೈ ಅವರು  ಈ ಚಿತ್ರದ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

      ಸಂದೀಪ್ ನಾಗರಾಜ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ತಮಿಳಿನ ಹೆಸರಾಂತ ತಂತ್ರಜ್ಞ ಸಮುದ್ರಖನಿ ಅವರು ಪ್ರಮುಖ  ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

     ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಶ್ರೀ ಜೈ "ಕವಳ' ಎಂದರೆ ತಾಂಬೂಲ‌. ಅದನ್ನು ಜಗಿದಾಗ ಬರುವ ಕೆಂಪುಬಣ್ಣವನ್ನು  ಚಿತ್ರದಲ್ಲಿ ಹೇಳಿದ್ದೇವೆ‌. ಒಂದಷ್ಟು ನೈಜಘಟನೆಗಳನ್ನು ಸ್ಪೂರ್ತಿಯಾಗಿಟ್ಟುಕೊಂಡು  ಈ ಚಿತ್ರದ ಕಥೆ ಹೆಣೆದಿದ್ದೇನೆ. ಒಂದು ಸ್ಟ್ರಾಂಗ್  ರೀಜನ್ ಗೋಸ್ಕರ ಹರಿಯುವ ರಕ್ತಧಾರೆ. 'ಕವಳ'ನ ಕಥೆ ಸ್ಪೂರ್ತಿಯಾಗಿರಬಹುದು. ಅದರೆ ಇದು ಆತನದೇ ಕಥೆಯಲ್ಲ. ಯುಗಾದಿ ನಂತರ ಆರಂಭಿಸಿ ಕಾಶಿ, ಹೈದರಾಬಾದ್  ಸೇರಿದಂತೆ ಹಲವಾರು ಲೊಕೇಶನ್ ಗಳಲ್ಲಿ ಶೂಟ್ ಮಾಡುವ ಯೋಜನೆಯಿದೆ. ಸಮುದ್ರಖನಿ ಅವರದು ಹೊರರಾಜ್ಯದಿಂದ ಬಂದವರ ಹೇಗೆ ಕನ್ನಡ ಮಾತಾಡುತ್ತಾರೋ ಅದೇ ರೀತಿ ಇರುತ್ತದೆ.  ನಿರ್ಮಾಪಕರು ನನ್ನನ್ನು ನಂಬಿ ದೊಡ್ಡ ಮಟ್ಟದ ಬಂಡವಾಳ ಹಾಕುತ್ತಿದ್ದಾರೆ. ಸ್ಕ್ರಿಪ್ಟ್ ಅದ್ಭುತವಾಗಿ ಮೂಡಿಬಂದಿದೆ' ಎಂದರು.

     ನಂತರ ಸಮುದ್ರಖನಿ ಮಾತನಾಡುತ್ತ "ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅವರ ಜತೆ ಎರಡು ಸಿನಿಮಾ ಮಾಡಿದ್ದು ಮರೆಯಲಾಗಮಾಡುತ್ತಿದ್ದೇನೆ" ಕನ್ನಡ ಸ್ವಲ್ಪ ಬರುತ್ತೆ. ಇದರಲ್ಲಿ ಒಂದು  ನೆಗೆಟಿವ್ ಪಾತ್ರ ಮಾಡುತ್ತಿದ್ದೇನೆ ಎಂದರು. ನಿರ್ಮಾಪಕ ಲೋಕೇಶ್ ಮಾತನಾಡಿ "ಸ್ಟಾರ್ಟಪ್ ಬ್ಯುಸಿನೆಸ್ ಮಾಡುತ್ತಿದ್ದೇನೆ.‌ಮೊದಲಿಂದಲೂ ಸಿನಿಮಾ ಬಗ್ಗೆ ಒಲವಿತ್ತು" ಎಂದರು. ಮತ್ತೊಬ್ಬ ನಿರ್ಮಾಪಕ ಅಡವಯ್ಯ ಪೂಜಾರ್ "ಸುಮಾರು 40 ಕಥೆಗಳನ್ನು ಕೇಳಿ ಇದನ್ನು ಫೈನಲ್ ಮಾಡಿದ್ದೇನೆ. ಗೂಗ್ಲಿಯಲ್ಲಿ ಸಂದೀಪ್ ಅಭಿನಯ ನೋಡಿದ್ದೆ. ನಾಯಕನ ಪಾತ್ರಕ್ಕೆ ಅವರೇ ಬೇಕೆಂದು ನಿರ್ದೇಶಕರಿಗೆ ಒತ್ತಾಯಿಸಿದೆ.ಸಮುದ್ರಖನಿ ಅವರ ಒಪ್ಪುತ್ತಾರೆ ಎಂಬ ನಂಬಿಕೆಯಿರಲಿಲ್ಲ" ಎಂದು ಹೇಳಿದರು.

     ನಾಯಕ ಸಂದೀಪ್ ನಾಗರಾಜ್ "ನಾನು ಈ ಪಾತ್ರ ಮಾಡುತ್ತೇನೆ ಎಂದು ನನ್ನ ನಂಬಿ ಇಂಥ ದೊಡ್ಡ ಪಾತ್ರ  ಕೊಟ್ಟಿದ್ದಾರೆ. ಅವರ ನಂಬಿಕೆ ಉಳಿಸಿಕೊಳ್ಳುತ್ತೇನೆ" ‌ಚ ಎಂದರು.‌ ಚಿತ್ರಕ್ಕೆ ಎ.ಕರುಣಾಕರನ್ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್  ಸಂಗೀತ, ಅರ್ಜುನ್ ರಾಜ್, ವಿಕ್ರಮ್ ಮೋರ್ ಸಾಹಸ, ಕಲೈ, ಮುರಳಿ ನೃತ್ಯ,  ದೀಪು ಎಸ್.ಕುಮಾರ್ ಸಂಕಲನವಿದೆ.

    'ಕವಳ' ಚಿತ್ರದ ಉಳಿದ ಪಾತ್ರಗಳಲ್ಲಿ  ಹಿರಿಯ ನಟರಾದ ಅಚ್ಯುತ್ ಕುಮಾರ್, ರಂಗಾಯಣ ರಘು, ನಾಜರ್, ಈಶ್ವರಿರಾವ್, ಬಲ ರಾಜವಾಡಿ, ಕಿಶೋರ್, ಶ್ರವಣ್, ಗಿಲ್ಲಿ ನಟ, ಪ್ರಕಾಶ್ ತುಮ್ಮಿನಾಡ್ ಹಾಗೂ ಇತರರು ನಟಿಸುತ್ತಿದ್ದಾರೆ.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್