LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮನೆ-ಪೋಷಕರಲ್ಲಿ ಎಸ್‌ಐಆರ್ ಅರಿವು ಮೂಡಿಸಿ: ವಿದ್ಯಾರ್ಥಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್ ಕಿವಿಮಾತು



ಬಳ್ಳಾರಿ,ಜು.03 : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ಅರ್ಹ ನಾಗರಿಕರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಹಮ್ಮಿಕೊಳ್ಳಲಾಗಿರುವ ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ’ ಪ್ರಕ್ರಿಯೆ ಕುರಿತು ಪೋಷಕರಲ್ಲಿ ಅರಿವು ಮೂಡಿಸಲು ಸರ್ಕಾರಿ (ಮಾ.ಪು) ಪದವಿ ಪೂರ್ವ (ಪಿಯು) ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಪ್ರತಿಯೊಬ್ಬ ನಾಗರಿಕರು ತಮ್ಮ ಮಾಹಿತಿಯನ್ನು ಸರಿಯಾಗಿ ಪರಿಶೀಲಿಸಿ ಎಸ್‌ಐಆರ್ ಗಣತಿ ನಮೂನೆಗಳನ್ನು ಭರ್ತಿ ಮಾಡಿ ಸಂಬAಧಿಸಿದ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು. ಇದರಿಂದ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಮತದಾರರ ಪಟ್ಟಿ ಸಿದ್ಧಗೊಳ್ಳಲು ಸಾಧ್ಯವಾಗುತ್ತದೆ. ಈ ಕುರಿತು ತಮ್ಮ ಮನೆಗಳಲ್ಲಿ ಹಾಗೂ ಪೋಷಕರಿಗೆ ಅರಿವು ಮೂಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಸಂವಿಧಾನಬದ್ಧವಾಗಿ ಸಿಕ್ಕಿದೆ. 18 ವರ್ಷ ತುಂಬುವ ಯುವಕ-ಯುವತಿಯರು ಸಹ ಫಾರ್ಮ್-6 ರ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು. ಈ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯಲ್ಲಿ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿರುವ ತಪ್ಪುಗಳ ತಿದ್ದುಪಡಿ (ಫಾರ್ಮ್-8) ಹಾಗೂ ಮರಣ ಹೊಂದಿದವರ ಅಥವಾ ಸ್ಥಳಾಂತರಗೊAಡವರ ಹೆಸರುಗಳ ಪತ್ತೆ ಮತ್ತು ತೆಗೆದುಹಾಕುವಿಕೆಗೆ ಸಹಕರಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಸಾರ್ವಜನಿಕರು ಕಚೇರಿಗಳಿಗೆ ಅಲೆಯದೆ ವೋಟರ್ ಹೆಲ್ಪ್ ಲೈನ್ ಆಪ್ ಅಥವಾ ವೋಟರ್ ಸರ್ವೀಸ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲೇ ಸುಲಭವಾಗಿ ಮತದಾರರ ಪಟ್ಟಿ, ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಜುಲೈ 29ರ ವರೆಗೆ ಬಿಎಲ್‌ಓ ಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಹಾಗೂ ಪರಿಶೀಲನೆ ನಡೆಸಿ ಗಣತಿ ನಮೂನೆ ನೀಡಲಿದ್ದಾರೆ. ನಂತರ ಆ. 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದ ಅವರು, ಗಣತಿ ನಮೂನೆ ಭರ್ತಿ ಮಾಡುವ ಕಾರ್ಯಚಟುವಟಿಕೆ ಕುರಿತು ಸುದೀರ್ಘವಾಗಿ ವಿವರಿಸಿ, ಈ ಬಗ್ಗೆ ಪೋಷಕರಲ್ಲಿ, ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದರು.
ಬಳಿಕ ಗಣ್ಯರು ಹಸಿರು ನಿಶಾನೆ ತೋರಿಸುವ ಮೂಲಕ ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂಶ್ ಶಿವಪುರೆ, ಜಿಪಂ ಸಹಾಯಕ ನಿರ್ದೇಶಕ ಬಸವರಾಜ ಹಿರೇಮಠ, ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸುಂಕಪ್ಪ ಸೇರಿದಂತೆ ಪ್ರಾಧ್ಯಾಪಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
*ಆಕರ್ಷಕ ಘೋಷಣಾ ಫಲಕಗಳು:*
ಜಾಥಾದಲ್ಲಿ ಪಾಲ್ಗೊಂಡಿದ್ದ ನೂರಾರು ವಿದ್ಯಾರ್ಥಿಗಳು ಘೋಷಣಾ ಫಲಕಗಳಲ್ಲಿ ‘ಇದೀಗ ಬಂದಿದೆ. ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರತಿಯೊಬ್ಬ ಅರ್ಹ ನಾಗರಿಕ, ಒಂದು ಮತ, ಒಂದು ಗುರುತು’, ‘ದೋಷರಹಿತ ಮತದಾರರ ಪಟ್ಟಿಗಳು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತವೆ’, ‘ಗಣತಿದಾರರ ಪ್ರತಿಯನ್ನು ದ್ವಿ-ನಮೂನೆಯಲ್ಲಿ ನೀಡಲಾಗುವುದು’, ‘ಗಣತಿ ನಮೂನೆಯಲ್ಲಿ ತಮ್ಮ ಇತ್ತೀಚಿನ ಭಾವಚಿತ್ರವನ್ನು ಬದಲಿಸಕೊಳ್ಳಬಹುದು’ ಎಂಬ ಘೋಷಣಾ ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆದರು.
ಜಾಥಾವು ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜಿನ ಮುಂಭಾಗದಿAದ ಆರಂಭಗೊAಡು ಇಂದಿರಾ ವೃತ್ತದ ಮೂಲಕ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಮರಳಿ ಕಾಲೇಜು ಆವರಣದಕ್ಕೆ ತಲುಪಿ ಅಂತ್ಯಗೊAಡಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್