LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರೀತಂ ಗೌಡರನ್ನು ಪಾದಯಾತ್ರೆಯಿಂದ ದೂರವಿಡಲು ನಿರ್ಧಾರ: ಸಿಎಸ್ ಪುಟ್ಟರಾಜು

ಮಂಡ್ಯ, ಆಗಸ್ಟ್ 8: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮಂಡ್ಯ ತಲುಪುತ್ತಿದ್ದಂತೆ ಸಂಘರ್ಷಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಪಾದಯಾತ್ರೆಗೆ ಆಗಮಿಸಿರುವುದು ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವಣ ಸಂಘರ್ಷಕ್ಕೆ ಕಾರಣವಾಗಿದೆ. ಬುಧವಾರ ಉಭಯ ಪಕ್ಷಗಳ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದರು. ಇದೀಗ ಗುರುವಾರ ಬೆಳಗ್ಗೆ ಪ್ರೀತಂ ಗೌಡ ಫ್ಲೆಕ್ಸ್​ಗೆ ಬೆಂಕಿ ಹಚ್ಚಲಾಗಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಪ್ರೀತಂ ಗೌಡರನ್ನು ಪಾದಯಾತ್ರೆಯಿಂದ ದೂರವಿಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಮಾಜಿ ಶಾಸಕ ಸಿಎಸ್ ಪುಟ್ಟರಾಜು ತಿಳಿಸಿದ್ದಾರೆ.

ಮಂಡ್ಯದಲ್ಲಿ ‘ಟಿವಿ9’ಗೆ ಹೇಳಿಕೆ ನೀಡಿದ ಪುಟ್ಟರಾಜು, ಪ್ರೀತಂ ಗೌಡರಿಗೂ ಬಿಜೆಪಿ ಜೆಡಿಎಸ್ ಮೈತ್ರಿಗೂ ಯಾವುದೇ ಸಂಬಂಧವಿಲ್ಲ. ನಮ್ಮ ಅಭಿಪ್ರಾಯವನ್ನು ಬಿಜೆಪಿ ನಾಯಕರಿಗೆ ತಿಳಿಸಿದ್ದೇವೆ. ಯಾವುದೇ ರೀತಿಯಲ್ಲೂ ಮೈತ್ರಿಗೆ ಭಂಗವಿಲ್ಲ. ಒಂದು ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ ಸಮಾವೇಶ ಮಾಡುತ್ತೇವೆ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ