LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜುಲೈ 15 ರಿಂದ ಜುಲೈ 26ರವರೆಗೆ ವಿಧಾನಸೌಧ ಸುತ್ತಮುತ್ತ ನಿಷೇದಾಜ್ಞೆ

ಬೆಂಗಳೂರು: ಜುಲೈ 15ರಿಂದ 26ರವರೆಗೆ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತಲಿನ ಎರಡು ಕಿಲೋಮಿಟರ್ ವರೆಗೂ ನಿಷೇದಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.


10 ದಿನಗಳ ಕಾಲ ನಡೆಯುವ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದ್ದು, ಈ ವೇಳೆ ವಿವಿಧ ರಾಜಕೀಯ ಪಕ್ಷಗಳು, ವಿವಿದ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ, ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧತೆಯಿದೆ. ಇದರಿಂದ ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೇ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯುಂಟಾಗುವ ಸಾಧ್ಯತೆ ಹೆಚ್ಚು.


ಈ ಹಿನ್ನೆಲೆಯಲ್ಲಿ ನನಗೆ ಭಾರತೀಯ ನಾಗರಿಕ ಸುರಕ್ಷ ಸಂಹಿತೆ (ಬಿಎನ್​​ಎಸ್​​ಎಸ್​) ಕಲಂ 163ನೇ ಪ್ರಕರಣದ ಅನ್ವಯ 15 ರಿಂದ 26ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ (ಅನುಮತಿ ಪಡೆದು ಫ್ರೀಡಂಪಾಕ್‌ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ) ಈ ಕೆಳಕೆಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇಧಾಜ್ಞೆ ವಿಧಿಸಿರುವುದಾಗಿ ಅದೇಶದಲ್ಲಿ ಆಯುಕ್ತರು ತಿಳಿಸಿದ್ದಾರೆ.


ವಿಧಾನಸೌಧದಲ್ಲಿ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ ಜುಲೈ 26ರವರೆಗೆ ನಡೆಯಲಿದೆ. ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದಾರೆ. ಜುಲೈ 15 ರಂದು ಅಧಿವೇಶನ ಆರಂಭದ ದಿನ. ಇಲ್ಲಿಯವರಗೆ ನಿಧನ ಹೊಂದಿರುವ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಲಾಗುವುದು ಎಂದು ಸ್ಪೀಕರ್ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್