LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮೊನಾಲಿಸ ಚಿತ್ರಕ್ಕೆ 20ರ ಸಂಭ್ರಮ ಗೌರಿ ಬಿಡುಗಡೆಗೆ ಮುದ್ದಾದ ಹಾಡುಗಳು

    ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಧ್ಯಾನ್ ಹಾಗೂ ಸದಾ ನಾಯಕ, ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್  'ಮೊನಾಲಿಸ' ಚಿತ್ರ ತೆರೆಕಂಡು ಇಪ್ಪತ್ತು ವರ್ಷಗಳಾಗಿದೆ. ಚಿತ್ರತಂಡದ ಸದಸ್ಯರೊಡನೆ ಕೇಕ್ ಕಟ್ ಮಾಡುವ ಮೂಲಕ 'ಮೊನಾಲಿಸ' ಚಿತ್ರದ ಇಪ್ಪತ್ತರ ಸಂಭ್ರಮವನ್ನು ಆಚರಿಸಲಾಯಿತು.


      ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ಧ್ಯಾನ್, ನಾಯಕಿ ಸದಾ, ನಟ ಶರಣ್, ಸಂಭಾಷಣೆ ಬರೆದಿದ್ದ ಬಿ ಎ ಮಧು, ಸ್ಥಿರ ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಡಿಸೈನರ್ ಮಣಿ ಸೇರಿದಂತೆ 'ಮೊನಾಲಿಸ' ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.


     ಇದೇ ಸಂಭ್ರಮದ ಸಂಧರ್ಭದಲ್ಲಿ ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿರುವ  "ಗೌರಿ"  ಚಿತ್ರದ 'ಮುದ್ದಾದ' ಸೇರಿದಂತೆ ಎರಡು ಹಾಡುಗಳು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಹಾಡನ್ನು ಬಿಡುಗಡೆ ಮಾಡಿದರು. ಇಂದಿರಾ ಲಂಕೇಶ್ ಅವರು ಉಪಸ್ಥಿತರಿದ್ದರು.  ಈ ಹಾಡನ್ನು ಇಂದ್ರಜಿತ್ ಅವರ ಸಹೋದರಿ ಗೌರಿ ಲಂಕೇಶ್ ಅವರಿಗೆ ಅರ್ಪಿಸಲಾಗಿದೆ.


     'ಮದ್ದಾದ" ಹಾಡನ್ನು 'ಮೊನಾಲಿಸ' ಚಿತ್ರದ ನಾಯಕ ಧ್ಯಾನ್, ನಾಯಕಿ ಸದಾ  ಸಮರ್ಜಿತ್ ಹಾಗೂ ನಾಯಕಿ ಸಾನ್ಯ ಅಯ್ಯರ್ ಸೇರಿ ಬಿಡುಗಡೆ ಮಾಡಿದರು.  'ಗೌರಿ' ಹಾಡನ್ನು ಕೆ.ಕಲ್ಯಾಣ್ ಹಾಗೂ 'ಮುದ್ದಾದ' ಹಾಡನ್ನು ಕವಿರಾಜ್ ಬರೆದಿದ್ದಾರೆ. ಆನಂದ್ ಆಡಿಯೋ ಮೂಲಕ ಹಾಡುಗಳು ಬಿಡುಗಡೆಯಾಗಿದೆ.


    ಹಂಸಲೇಖ ಅವರು ಮಾತನಾಡಿ "ಸಂಗೀತ ಎಂದರೆ ಸಿನಿಮಾ. ಸಿನಿಮಾ ಎಂದರೆ ಸಂಗೀತ. ಸಂಗೀತವಿಲ್ಲದ ಸಿನಿಮಾವನ್ನು ಊಹಿಸಿಕೊಳ್ಳಲು ಅಸಾಧ್ಯ. ಸ್ಟೈಲಿಶ್ ಚಿತ್ರಗಳಿಗೆ ಹೆಸರಾದ ಇಂದ್ರಜಿತ್ ಅವರು ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ತಮ್ಮ ನಿರ್ದೇಶನದಲ್ಲೇ ಮಗನನ್ನು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸುತ್ತಿದ್ದಾರೆ. ನನ್ನಿಂದ ಬಿಡುಗಡೆಯಾದ ಹಾಡನ್ನು ಗೌರಿ ಲಂಕೇಶ್ ಅವರಿಗೆ ಅರ್ಪಿಸಿದ್ದಾರೆ.  'ಗೌರಿ' ಚಿತ್ರ ಯಶಸ್ವಿಯಾಗಲಿ" ಎಂದು ಹಾರೈಸಿದರು.


     ಇಂದ್ರಜಿತ್ ಲಂಕೇಶ್ ಮಾತನಾಡಿ, "ಗೌರಿ' ಚಿತ್ರದಲ್ಲಿ ಏಳು ಹಾಡುಗಳಿದೆ. ಇದೊಂದು ಸಂಗೀತ ಪ್ರಧಾನ ಚಿತ್ರವಾಗಿರುವುದರಿಂದ ಹಂಸಲೇಖ ಅವರಿಂದಲೇ ಹಾಡು ಬಿಡುಗಡೆ ಮಾಡಿಸಬೇಕೆಂಬ ಹಂಬಲ ನನ್ನಗಿತ್ತು.  ಆ ಹಾಡನ್ನು ನನ್ನ ಅಕ್ಕ ಗೌರಿ ಲಂಕೇಶ್ ಅವರಿಗೆ ಅರ್ಪಣೆ ಮಾಡಲಾಗಿದೆ. ಇನ್ನು ಚಿತ್ರಕ್ಕೆ ಸೆನ್ಸಾರ್ ಮಂಡಳಿ 'ಯು: ಪ್ರಮಾಣ ಪತ್ರ ನೀಡಿದೆ. ಆಗಸ್ಟ್ ಹದಿನೈದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.


ಗಂಗಾಧರ್ ಮೈಸೂರು ಭಾಗದ ವಿತರಕರು. ಮೈಸೂರು ಒಂದನ್ನು ಬಿಟ್ಟು ವಿಶಾಲ ಕರ್ನಾಟಕಕ್ಕೆ ಜಯಣ್ಣ ಫಿಲಂಸ್ ಅವರು  ವಿತರಣೆ ಮಾಡುತ್ತಿದ್ದಾರೆ. ಡಬ್ಬಿಂಗ್ ರೈಟ್ಸ್ ಕೂಡ ಮಾರಾಟವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಮೂಲಕ ನಮ್ಮ ಚಿತ್ರ ಗೆದ್ದಿದೆ. ಇನ್ನೇನಿದ್ದರೂ ನಿರ್ದೇಶಕನಾಗಿ ನಾನಪ ಗೆಲ್ಲಬೇಕು" ಎಂದರು.


     "ನನ್ನ ಬಹು ದಿನಗಳ ಕನಸು ನನಸ್ಸಾಗುವ ಸಮಯ ಸಮೀಪಿಸಿದೆ. ಮೊದಲು ನಾನು ನನ್ನ ಅಪ್ಪನಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಹೇಳುತ್ತೇನೆ" ಎಂದರು ನಾಯಕ ಸಮರ್ಜಿತ್ ಲಂಕೇಶ್.


."ಇಷ್ಟು ದಿಗ್ಗಜ್ಜರ ನಡುವೆ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದು ಖುಷಿಯಾಗಿದೆ" ಎಂದರು ನಾಯಕಿ ಸಾನ್ಯಾ ಅಯ್ಯರ್. 'ಗೌರಿ' ಚಿತ್ರದ ಛಾಯಾಗ್ರಾಹಕ ಕೆ.ಕೆ, ಗೀತರಚನೆ ಮಾಡಿರುವ ಕೆ.ಕಲ್ಯಾಣ್, ಕವಿರಾಜ್ ಚಿತ್ರದ ಕುರಿತು ಮಾತನಾಡಿದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್