LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ದಾನೇಶ್ವರಿ, ಪೂಜಾ ಆಯ್ಕೆ

 

ಮಹಾಲಿಂಗಪುರ, ಸೆ. ೨೧: ಮುಧೋಳ ತಾಲೂಕಿನ ರನ್ನ ಕ್ರೀಡಾಂಗಣದಲ್ಲಿ ನಡೆದ ೨೦೨೬ನೇ ಸಾಲಿನ ೧೪ ಮತ್ತು ೧೭ ವರ್ಷದೊಳಗಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಹಾಲಿಂಗಪುರ ನಗರದ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ವಿದ್ಯಾರ್ಥಿನಿ ಕುಮಾರಿ ದಾನೇಶ್ವರಿ ಪೂಜಾರಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕುಮಾರಿ ಪೂಜಾ ಸಿಕ್ಕಲಗಾರ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಅಭಿನಂದನೆ ಸಲ್ಲಿಸಿದ ಮುಖ್ಯೋಪಾಧ್ಯಾಯ ಧನಂಜಯ ಕುಲಕರ್ಣಿ, "ವಿದ್ಯಾರ್ಥಿಗಳ ಪರಿಶ್ರಮ, ಶಿಸ್ತು, ಆತ್ಮವಿಶ್ವಾಸ ಹಾಗೂ ನಿರಂತರ ಅಭ್ಯಾಸವೇ ಈ ಸಾಧನೆಗೆ ಕಾರಣವಾಗಿದೆ. ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆ, ಶಿಕ್ಷಕರು, ಪೋಷಕರು ಹಾಗೂ ಊರಿಗೆ ಕೀರ್ತಿ ತರಬೇಕು. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿಯೂ ಸಾಧನೆ ಮಾಡುವಂತಾಗಲಿ" ಎಂದು ಶುಭ ಹಾರೈಸಿದರು.

ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕ ಎಂ.ಎಸ್. ಮಲಬದಿ ಅವರಿಗೂ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕರಾದ ಎನ್.ಬಿ. ಬೆಟಿಗೇರಿ, ಆರ್.ಸಿ. ಜಾಲಿಗಿಡ, ಎಂ.ಜಿ. ಅಲ್ಲಖಾನ್, ರೇಣುಕಾ ಕರಿಗಾರ, ಆರ್.ಎಸ್. ಲಮಾಣಿ, ವೈ.ಎಚ್. ಕಪರಟ್ಟಿ, ಎಸ್.ಎಲ್. ಕಂಬಾರ, ಬಾಳೇಶ ಮನ್ನಿಕೇರಿ, ಯೋಗ ಶಿಕ್ಷಕ ರಾಘವೇಂದ್ರ ನೀಲನ್ನವರ ಸಿಬ್ಬಂದಿ ವರ್ಗ ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ವಿದ್ಯಾರ್ಥಿನಿಯರ ಸಾಧನೆಯನ್ನು ಅಭಿನಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST