LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪರೀಕ್ಷಾ ಕೇಂದ್ರಗಳಿಗೆ ಡಿಸಿ, ಸಿಇಓ ಭೇಟಿ

ಬಾಗಲಕೋಟೆ, ಎಪ್ರೀಲ್ ೨೩  : ಜಿಲ್ಲೆಯ ಬಾಗಲಕೋಟೆ ಮತ್ತು ಜಮಖಂಡಿ ನಗರಗಳಲ್ಲಿ ಗುರುವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿ.ಪಂ ಸಿಇಓ ಶಶಿಧರ ಕುರೇರ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆಗಳ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಸಂಗಪ್ಪ ಅವರು ನಗರದ ಎಸ್.ಬಿ.ಪಾಟೀಲ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಸ್ಥಾಪಿಸಲಾದ ಕೇಂದ್ರಕ್ಕೆ ಭೇಟಿ ನೀಡಿದರೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆ, ವಿದ್ಯಾಗಿರಿಯಲ್ಲಿರುವ ತುಂಗಳ ಸೈನ್ಸ್ ಕಾಲೇಜ, ಬಾಗಲಕೋಟೆ ನಗರದ ಬಸವೇಶ್ವರ ಆಟ್ಸ್ ಕಾಲೇಜ ಹಾಗೂ ಸರಕಾರಿ ಹೆಣ್ಣು ಮಕ್ಕಳ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷಾರ್ಥಿಗಳಿಗೆ ಕಲ್ಪಿಸಲಾದ ಮೂಲಭೂತ ಸೌಲಭ್ಯಗಳು, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಿದ್ಯುತ್ ಪೂರೈಕೆ ಸೇರಿದಂತೆ ಕೇಂದ್ರಗಳಲ್ಲಿ ಕೈಗೊಳ್ಳಲಾದ ಸಿದ್ದತೆಗಳನ್ನು ಪರಿಶೀಲಿಸಿದರು. ಪರೀಕ್ಷೆಗಳು ಯಾವುದೇ ಅಡಚಣೆ ಇಲ್ಲದೇ ಸುಗಮವಾಗಿ ನಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಕೇಂದ್ರದ ಸುತ್ತಮುತ್ತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿರುವ ಬಗ್ಗೆ ಮಾಹಿತಿ ಪಡೆದು, ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ತಿಳಿಸಿದರು. 
ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿ.ಪಂ ಸಿಇಓ ಅವರ ಭೇಟಿ ಸಂದರ್ಭದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್