LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆಯಲು ನಿರ್ಧಾರ!

ಧಾರವಾಡ, ಏಪ್ರಿಲ್‌ 22: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ದಿಂಗಾಲೇಶ್ವರ ಸ್ವಾಮೀಜಿಗಳು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು, ನಾಮಪತ್ರ ಸಲ್ಲಿಸಿದ್ದರು. ಆದರೆ ಈಗ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ. ಇತ್ತ ಕಾಂಗ್ರೆಸ್‌ ನಿಂದ ವಿನೋದ್‌ ಅವರು ಸ್ಪರ್ಧೆ ನಡೆಸಿದ್ದು,ಧಾರವಾಡ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಇನ್ನೂ ಚುನಾವಣಾ ಪ್ರಚಾರದ ನಡೆಸಿದ್ದ ದಿಂಗಾಲೇಶ್ವರ ಸ್ವಾಮೀಜಿಗಳು ಪ್ರಧಾನಿಯೇ ಬಂದು ಹೇಳಿದರೂ ನಾಮಪತ್ರ ಹಿಂಪಡೆಯಲ್ಲ ಎಂದು ಹೇಳಿದ್ದ ಸ್ವಾಮೀಜಿ ಈಗ ಮನಸ್ಸು ಬದಲಿಸಿದ್ದು, ಸ್ವಾಮೀಜಿ ಮನವೊಲಿಸಿದ್ದು ಬಿಜೆಪಿನಾ? ಕಾಂಗ್ರೆಸ್ಸಾ? ಎಂಬ ಪ್ರಶ್ನೆ ಮೂಡಿದೆ

ಶಿರಹಟ್ಟಿ ಮಠದ ಹಿರಿಯ ಪೀಠಾಧಿಪತಿ ಫಕ್ಕೀರ ಶಿವಯೋಗಿ ಸಿದ್ದರಾಮ ಶ್ರೀಗಳ ಸೂಚನೆ ಮೇರೆಗೆ ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲೇಶ್ವರ ಸ್ವಾಮೀಜಿ ಸಮುದಾಯದವರ ಮಾತಿಗೆ ಕಟಿಬಿದ್ದು ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಆಶಯದಂತೆ ನಾಮಪತ್ರವನ್ನು ಹಿಂಪಡೆಯುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಇನ್ನೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ಸಮುದಾಯದ ಜೊತೆಗೆ ಭಕ್ತರ ವಿರೋಧವನ್ನು ಎದುರು ಹಾಕಿಕೊಳ್ಳಬೇಕಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರು ದೂರವಾಣಿಯಲ್ಲಿ ಸಂಪರ್ಕಿಸಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ದಿಂಗಾಲೇಶ್ವರ ಸ್ವಾಮೀಜಿಗಳು ಮಾತನಾಡಿ, ನನಗೆ ಈಗಲೂ ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಮೇಲೆ ಇರುವ ಅಸಮಾಧಾನ ಸ್ವಲ್ಪವೂ ಕಡಿಮೆಯಾಗಿಲ್ಲ. ಆದರೆ ನೀವು ಮತ್ತು ನಿಮ್ಮ ಕುಟುಂಬದವರು ಮಠದ ಬಗ್ಗೆ ಇಟ್ಟುಕೊಂಡಿರುವ ಗೌರವದಿಂದ ನಿಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ಹಿಂಪಡೆಯುತ್ತಿದ್ದೇನೆ.

ಮುಂದಿನ ದಿನಗಳಲ್ಲಾದರೂ ಪ್ರಹ್ಲಾದ್ ಜೋಷಿಗೆ ನಮ್ಮ ಸಮುದಾಯದ ವಿರುದ್ಧ ಷಡ್ಯಂತ್ರ್ಯ ನಡೆಸುವುದು ಇಲ್ಲವೇ ಎರಡು ಮತ್ತು ಮೂರನೇ ಹಂತದ ನಾಯಕರನ್ನು ತುಳಿಯುವ ಪ್ರವೃತ್ತಿ ಬಿಡುವಂತೆ ಸೂಚನೆ ನೀಡಿ ಎಂದು ಸ್ವಾಮೀಜಿ ಹೇಳಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ