LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿ ಜಿಲ್ಲೆಯನ್ನು  ಬರ ಜಿಲ್ಲೆ ಎಂದು  ಘೋಷಿಸಿ : ಆರ್. ಅಶೋಕ್ ಆಗ್ರಹ

ಬಳ್ಳಾರಿ, ಜು. 31: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು ಬರೆದ ಛಾಯೆ ಬೀಸುತ್ತಿದೆ  ಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ . ರೈತರಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸರ್ಕಾರವನ್ನು ಅಗ್ರಹಿಸಿದರು.
ಅವರುl ಬಳ್ಳಾರಿ ತಾಲೂಕಿನ ಕೆ ವೀರಪುರ ಮತ್ತು ಸುತ್ತಮುತ್ತಲ  ಗ್ರಾಮೀಣ ಭಾಗಗಳಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ , ಬಳ್ಳಾರಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಮಳೆಯ ಅಭಾವದಿಂದ ಬೆಳೆಗಳು ಸಂಪೂರ್ಣ ಒಣಗಿ ಹೋಗಿದ್ದು, ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. 
ಕೆ ವೀರಾಪುರ ಗ್ರಾಮದಲ್ಲಿ ಕುಡಿಯುವ ನೀರು ಕೆರೆಯಲ್ಲಿ ಜನಿಕಿ ಮತ್ತು ಬಸ್ಯಾಯಾ ಕಾರ್ಖಾನೆಗಳಿಂದ ಬರುವ ಧೂಳು ಕುಡಿಯುವ ನೀರಿನ ಮೇಲೆ ಬಿದ್ದು ಸಾರ್ವಜನಿಕರಿಗೆ ಮತ್ತು ಶಾಲೆಯ ಮಕ್ಕಳಿಗೆ ಅನಾರೋಗ್ಯದಿಂದ ಬಳುತಿದ್ದಾರೆ. 
ಸಿಡಿಗಿನಮೊಳ, ಕಾರೇಕಲ್ ಸೇರಿದಂತೆ ವಿವಿಧ ಗ್ರಾಮಗಳ ಹೊಲಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ರೈತರು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ ಆ ರೈತರಿಗೆ ನಷ್ಟ ಪರಿಹಾರವನ್ನು ಸರ್ಕಾರದಿಂದ ಶೀಘ್ರವೇ ಘೋಷಿಸಬೇಕೆಂದು ಈ ಸಂದರ್ಭದಲ್ಲಿ ಅವರು ಒತ್ತಾ  ಯಿಸಿದರು.
 
ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಶೇ.32ರಷ್ಟು ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಸರ್ಕಾರ ಇದುವರೆಗೆ ಯಾವುದೇ ಅಧಿಕೃತ ಕ್ರಮ ಕೈಗೊಂಡಿಲ್ಲ. ಒಬ್ಬ ಅಧಿಕಾರಿಯೂ ಗ್ರಾಮಗಳಿಗೆ ತೆರಳಿ ಬೆಳೆ ಹಾನಿಯ ವೀಕ್ಷಣೆ ನಡೆಸಿಲ್ಲ. ರೈತರು ಹೊಲಗಳಲ್ಲೇ ಧರಣಿ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಅವರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ಬರ ಘೋಷಣೆ ಮಾಡಿ ಪರಿಹಾರ ನೀಡಲು ಅಗತ್ಯ ಹಣವೂ ಸರ್ಕಾರದ ಬಳಿ ಇಲ್ಲದಂತಾಗಿದೆ. ರಾಜ್ಯದ ಖಜಾನೆ ಖಾಲಿಯಾಗಿರುವ ಕಾರಣ ರೈತರ ಸಮಸ್ಯೆಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ದೆಹಲಿಗೆ ತೆರಳಿರುವುದು ರೈತರ ಬಗ್ಗೆ ಸರ್ಕಾರದ ನಿರ್ಲಕ್ಷ್ಯದ ಮನೋಭಾವವನ್ನು ತೋರಿಸುತ್ತದೆ ಎಂದು ಟೀಕಿಸಿದರು.
ತುಂಗಭದ್ರಾ ಜಲಾಶಯದ ನೀರಿನ ವಿಷಯ ಪ್ರಸ್ತಾಪಿಸಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಲಾಶಯದಲ್ಲಿ ಕೇವಲ 26 ಟಿಎಂಸಿ ನೀರಿದ್ದರೂ ರೈತರ ಹಿತದೃಷ್ಟಿಯಿಂದ ನೀರು ಹರಿಸಲಾಗಿತ್ತು. ಆದರೆ ಈಗ ಸುಮಾರು 36 ಟಿಎಂಸಿ ನೀರು ಲಭ್ಯವಿದ್ದರೂ ಕಾಂಗ್ರೆಸ್ ಸರ್ಕಾರ ರೈತರಿಗೆ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಬರದ ಪರಿಸ್ಥಿತಿಯ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಜುಲೈ 31ರಂದು ಅಂಜನಾದ್ರಿ ಬೆಟ್ಟದಿಂದ ತುಂಗಭದ್ರಾ ಜಲಾಶಯದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ರೈತರ ಹಕ್ಕಿಗಾಗಿ ಈ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಆರ್. ಅಶೋಕ್,  ಅಧಿಕಾರಕ್ಕೆ ಬಂದ ಬಳಿಕ ಎರಡು ತಿಂಗಳಲ್ಲೇ ರಾಜ್ಯದ ಜಲಾಶಯಗಳು ಖಾಲಿಯಾಗಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಹದಗೆಟ್ಟಿದೆ ಎಂದು ಆರೋಪಿಸಿದ ಅಶೋಕ್  
ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಿ, ವಿಶೇಷ ತಂಡಗಳನ್ನು ರಚಿಸಿ ಬೆಳೆ ಹಾನಿಯ ಸಮೀಕ್ಷೆ ನಡೆಸಬೇಕು. ರೈತರಿಗೆ ತಕ್ಷಣ ಬೆಳೆ ನಷ್ಟ ಪರಿಹಾರ, ಬೆಳೆ ಸಾಲಗಳ ಮರುಪಾವತಿಗೆ ವಿನಾಯಿತಿ, ಬಡ್ಡಿ ಸಡಿಲಿಕೆ ಹಾಗೂ ಅಗತ್ಯ ಆರ್ಥಿಕ ನೆರವು ಒದಗಿಸಬೇಕು. ಸರ್ಕಾರ ವಿಳಂಬ ಮುಂದುವರಿಸಿದರೆ ಭಾರತೀಯ ಜನತಾ ಪಕ್ಷದ ನೇತೃತ್ವದಲ್ಲಿ ರಾಜ್ಯಾದ್ಯಂತ ರೈತರ ಪರ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
 ಈ ಸಂದರ್ಭದಲ್ಲಿ  ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಬಿಜೆಪಿ ಜಿಲ್ಲಾಾಧ್ಯಕ್ಷ ಅನಿಲ್ ಕುಮಾರ್ ಮೋಕಾ ನಾಯ್ಡು, ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಬಂಗಾರು ಹನುಮಂತು, ಭೈರತಿ ಬಸವರಾಜ್, ವೈ.ಎಂ. ಸತೀಶ್, ಬಿ.ಪಿ. ಹರೀಶ್, ಕೃಷ್ಣ ನಾಯಕ್, ಸೋಮಲಿಂಗಪ್ಪ, ಕೆ.ಎಸ್. ದಿವಾಕರ್, ಮಾಜಿ ಸಂಸದ ಸಣ್ಣ ಫಕೀರಪ್ಪ, ಮಹಿಪಾಲ್, ಗುರುಲಿಂಗನಗೌಡ, ಐನಾಥ್ ರೆಡ್ಡಿ, ಜಿ.ಟಿ. ಪಂಪಾಪತಿ, ರಾಮಲಿಂಗಪ್ಪ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್