LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಖಾಸಗಿ ಡೈರಿಗಳಿಗೆ ಎಮ್ಮೆ ಹಾಲು ಪೂರೈಸುವ ಬದಲು ಬೆಳಗಾವಿ ಹಾಲು ಒಕ್ಕೂಟಕ್ಕೆ ಕನಿಷ್ಠ ಶೇ.50ರಷ್ಟು ಎಮ್ಮೆ ಹಾಲು ನೀಡಿದರೆ ರೈತರು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಎಲ್ಲ ನ್ಯಾಯಯುತ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು.

ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಬೆಮುಲ್) ವಾರ್ಷಿಕ ಸರ್ವಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸತತ ಎರಡನೇ ವರ್ಷವೂ ಬೆಮುಲ್ ಲಾಭದಲ್ಲಿದ್ದು, ಕಳೆದ ವರ್ಷ ₹13 ಕೋಟಿ ಹಾಗೂ ಪ್ರಸಕ್ತ ವರ್ಷ ₹12.59 ಕೋಟಿ ಲಾಭ ಗಳಿಸಲಾಗಿದೆ ಎಂದು ತಿಳಿಸಿದರು.

ಒಕ್ಕೂಟಕ್ಕೆ ಬಂದ ಲಾಭವನ್ನು ತೆರಿಗೆ ರೂಪದಲ್ಲಿ ಪಾವತಿಸುವುದಕ್ಕಿಂತ ರೈತರ ಕಲ್ಯಾಣ ಯೋಜನೆಗಳ ಮೂಲಕ ಮತ್ತೆ ರೈತರಿಗೇ ಹಿಂದಿರುಗಿಸಲಾಗುತ್ತಿದೆ ಎಂದರು.
ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಒಕ್ಕೂಟ ವ್ಯಾಪ್ತಿಯ 669 ಹಾಲು ಉತ್ಪಾದಕರ ಸಂಘಗಳ ಪೈಕಿ 215 ಸಂಘಗಳು ಇದುವರೆಗೆ ಒಂದು ಲೀಟರ್ ಎಮ್ಮೆ ಹಾಲನ್ನೂ ಬೆಮುಲ್‌ಗೆ ಪೂರೈಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಎಮ್ಮೆ ಹಾಲು ಖಾಸಗಿ ಸಂಸ್ಥೆಗಳಿಗೆ ಹೋಗುತ್ತಿರುವುದರಿಂದ ಮೊಸರು, ತುಪ್ಪ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳ ಮಾರುಕಟ್ಟೆಯಲ್ಲಿ ಒಕ್ಕೂಟಕ್ಕೆ ಹಿನ್ನಡೆಯಾಗುತ್ತಿದೆ. ಹೀಗಾಗಿ ಸಂಘಗಳು ಮತ್ತು ರೈತರು ಕನಿಷ್ಠ ಶೇ.50ರಷ್ಟು ಎಮ್ಮೆ ಹಾಲನ್ನು ಬೆಮುಲ್‌ಗೆ ಪೂರೈಸಬೇಕು ಎಂದು ಮನವಿ ಮಾಡಿದರು.

news_1784553978_0_356.webp

ರೈತರಿಗೆ ಘೋಷಿಸಿದ್ದ ₹1 ಲಕ್ಷ ವಿಮಾ ಯೋಜನೆ ಜಾರಿಗೊಳಿಸಲು ವಿಮಾ ಕಂಪನಿಗಳು 70 ವರ್ಷ ಮೇಲ್ಪಟ್ಟ ಸದಸ್ಯರಿಗೆ ವಿಮೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆ ಯೋಜನೆಯನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

 ಅದರ ಬದಲಿಗೆ ರೈತ ಕಲ್ಯಾಣ ನಿಧಿಯಿಂದ ಹಾಲು ಪೂರೈಸುವ ಸದಸ್ಯರ ನಿಧನಕ್ಕೆ ₹60 ಸಾವಿರ ಹಾಗೂ ಹಾಲು ಪೂರೈಸದ ಸದಸ್ಯರ ಕುಟುಂಬಕ್ಕೆ ₹25 ಸಾವಿರ ನೆರವು ನೀಡುವ ಹೊಸ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಬೆಮುಲ್ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಸಭೆಯಲ್ಲಿ ಪ್ರಕಟಿಸಲಾಯಿತು. 

2026-27 ಮತ್ತು 2027-28ನೇ ಸಾಲಿನಲ್ಲಿ 30 ಸಾವಿರ ರಬ್ಬರ್ ಮ್ಯಾಟ್‌ಗಳ ವಿತರಣೆ, 400 ಮೇವು ಕತ್ತರಿಸುವ ಯಂತ್ರಗಳು, 100 ಮಿಲ್ಕಿಂಗ್ ಯಂತ್ರಗಳು, 15 ಹೊಸ ಬಲ್ಕ್ ಮಿಲ್ಕ್ ಕೂಲರ್‌ಗಳ ಸ್ಥಾಪನೆ, 150 ಬಯೋಗ್ಯಾಸ್ ಘಟಕಗಳ ನಿರ್ಮಾಣ, 100 ಹೊಸ ಹಾಲು ಉತ್ಪಾದಕರ ಸಂಘಗಳಿಗೆ ಡಿಸಿಎಸ್ ಸಾಮಗ್ರಿಗಳ ವಿತರಣೆ, ಹೊಸ ಕಟ್ಟಡ ನಿರ್ಮಿಸಿರುವ 40 ಸಂಘಗಳಿಗೆ ತಲಾ ₹5 ಲಕ್ಷ ಅನುದಾನ ಸೇರಿದಂತೆ ವಿವಿಧ ಯೋಜನೆಗಳಿಗೆ ಕೋಟ್ಯಂತರ ರೂಪಾಯಿ ಮೀಸಲಿಡಲಾಗಿದೆ.
ಪ್ರಸ್ತುತ ಲೀಸ್‌ನಲ್ಲಿರುವ 25 ಎಕರೆ ಜಾಗವನ್ನು ಸರ್ಕಾರದಿಂದ ಖರೀದಿಸಿ ಅತ್ಯಾಧುನಿಕ ಮೆಗಾ ಡೈರಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೊಸ ಡೈರಿಯಿಂದ ಉತ್ಪಾದನಾ ವೆಚ್ಚ ಕಡಿಮೆಯಾಗಿ ರೈತರಿಗೆ ಹೆಚ್ಚಿನ ಲಾಭ ದೊರೆಯಲಿದೆ ಎಂದು ಹೇಳಿದರು.

ಕಳೆದ ಎರಡು ವರ್ಷಗಳಲ್ಲಿ ಆಕಳ ಹಾಲಿನ ಖರೀದಿ ದರವನ್ನು ₹29.10ರಿಂದ ₹34ಕ್ಕೆ ಹಾಗೂ ಎಮ್ಮೆ ಹಾಲಿನ ದರವನ್ನು ₹41.60ರಿಂದ ₹50ಕ್ಕೆ ಹೆಚ್ಚಿಸಲಾಗಿದೆ. ರೈತರಿಗೆ ಹತ್ತು ದಿನಕ್ಕೊಮ್ಮೆ ಬಿಲ್ ಪಾವತಿ ವ್ಯವಸ್ಥೆ ಮುಂದುವರಿಯಲಿದ್ದು, ದರವನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

2025-26ನೇ ಸಾಲಿನಲ್ಲಿ ಬೆಮುಲ್ ವ್ಯಾಪಾರ ವಹಿವಾಟು ₹515.15 ಕೋಟಿಗೆ ಏರಿಕೆಯಾಗಿದ್ದು, ₹2.64 ಕೋಟಿ ನಿವ್ವಳ ಲಾಭ ಗಳಿಸಿದೆ. ಹಾಲು ಉತ್ಪಾದಕರ ಸಂಘಗಳು ಮತ್ತು ಸದಸ್ಯರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲು ₹13 ಕೋಟಿ, ಮಾರಾಟ ಅಭಿವೃದ್ಧಿಗೆ ₹2.50 ಕೋಟಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ₹4.50 ಕೋಟಿ ಸೇರಿದಂತೆ ಹಲವು ಯೋಜನೆಗಳನ್ನು ಅನುಮೋದಿಸಲಾಗಿದೆ. ಕಬ್ಬಿನ ಜೊತೆಗೆ ಹೈನುಗಾರಿಕೆಯೂ ರೈತರ ಆರ್ಥಿಕ ಆಧಾರವಾಗಬೇಕು. ಬೆಮುಲ್ ಇನ್ನಷ್ಟು ಬೆಳೆಯಲು ರೈತರ ಸಹಕಾರವೇ ಮುಖ್ಯ. ರೈತರ ಹಿತಾಸಕ್ತಿಯೇ ನಮ್ಮ ಆಡಳಿತ ಮಂಡಳಿಯ ಪ್ರಮುಖ ಗುರಿ ಆಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ವೇದಿಕೆಯಲ್ಲಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ರಾಹುಲ್ ಸತೀಶ ಜಾರಕಿಹೊಳಿ, ಬೆಮೂಲ್ ನಿರ್ದೇಶಕರಾದ ಬಾಬು ಕಟ್ಟಿ, ಮಲ್ಲಪ್ಪ ಪಾಟೀಲ, ಕಲ್ಲಪ್ಪ ಗಿರೆನ್ನವರ, ಡಾ. ಬಸವರಾಜ ಪರವಣ್ಣವರ, ಬಾಬುರಾವ ವಾಘಮೋಡೆ, ವಿರುಪಾಕ್ಷಿ ಈಟಿ, ರಾಯಪ್ಪ ಡೂಗ, ಪ್ರಕಾಶ ಅಂಬೋಜಿ, ಮಹಾದೇವ ಬಿಳಿಕುರಿ, ಸಂಜಯ ಶಿಂತ್ರಿ, ರಮೇಶ ಅಣ್ಣಿಗೇರಿ, ಸದೆಪ್ಪ ವಾರಿ, ಶಂಕರ ಇಟ್ನಾಳ, ಸವಿತಾ ಖಾನಪ್ಪಗೋಳ, ನಾಮ ನಿರ್ದೇಶಿತ ಸದಸ್ಯ ವಸಂತ ಕರಿಗಾರ, ವೃತ್ತಿಪರ ನಿರ್ದೇಶಕರಾದ ಅಜೀತ ದೇಸಾಯಿ, ಬಸವರಾಜ ಮಾಳೇದವರ, ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀಕಾಂತ ವಿ.ಎನ್ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್