LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜೋಳ ಖರಿಧೀಯ ಹಣ ಕೂಡಲೇ ಬಿಡುಗಡೆಗೆ ಆಗ್ರಹ - ಎ ಐ ಕೆ ಕೆ ಎಂ ಎಸ್

ಬಳ್ಳಾರಿ, ಜುಲೈ 28: ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ಖರೀದಿಸಲಾದ ಜೋಳದ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ಬಳ್ಳಾರಿ ಜಿಲ್ಲಾ ಸಮಿತಿಯು ಇಂದು ಜಿಲ್ಲಾಧಿಕಾರಿಗಳ ಕಛೇರಿ ಬಳಿ ಪ್ರತಿಭಟನೆ ಮಾಡಿ ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಿಗೆ ಮಾನ್ಯ ಅಪರ ಜಿಲ್ಲಾಧಿಕಾರಿಗಳ ಮೂಲಕ  ಮನವಿ ಸಲ್ಲಿಸಲಾಯಿತು
ಈ ಸಂಧರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡುತ್ತಾ ಜೋಳವನ್ನು ಸರ್ಕಾರಕ್ಕೆ ಮಾರಾಟ ಮಾಡಿ ಮೂರು ತಿಂಗಳಾದರೂ ರೈತರಿಗೆ ಇನ್ನೂ ಹಣ ಪಾವತಿಯಾಗಿಲ್ಲ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಸಾಲ ಮರುಪಾವತಿ, ಮುಂದಿನ ಬೆಳೆಗಾಗಿ ಅಗತ್ಯ ಸಿದ್ಧತೆಗಳು ಹಾಗೂ ಕುಟುಂಬ ನಿರ್ವಹಣೆಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಇಂದು ಖರೀಧಿಯ ಹಣ ರೈತರಿಗೆ ಪಾವತಿಸದೇ, ಪಡಿತರ ವಿತರಣೆಯಲ್ಲಿ ಜೋಳ ನೀಡುತ್ತಿದ್ದಾರೆ, ಇದು ಸರಿಯಲ್ಲ, 
ಆದ್ದರಿಂದ ಜೋಳ ಖರೀದಿಯ ಎಲ್ಲಾ ಬಾಕಿ ಹಣವನ್ನು ಯಾವುದೇ ವಿಳಂಬವಿಲ್ಲದೆ ರೈತರ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡಬೇಕು ಎಂದರು.
 ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಮಾತನಾಡುತ್ತಾ ಇಂದು ಬಳ್ಳಾರಿ ಸೇರಿದಂತೆ ರಾಜ್ಯದಾದ್ಯಂತ ತೀವ್ರ ಬರ ಎದುರಾಗಿದ್ದು, ಸಾಮಾನ್ಯ ರೈತರು ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ಎದುರಾಗಿದೆ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರ ರಾಜಕೀಯ ಬಲಯಾಟ ಆಡುತ್ತಿದ್ದಾರೆ,  ಇದನ್ನು ಬಿಟ್ಟು ಜನರ ಸಂಕಷ್ಟಗಳ ಪರಿಹಾರಕ್ಕೆ ಗಮನ ಕೊಡಬೇಕು.  ಮುಂದಿನ ದಿನಗಳಲ್ಲಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದ ಕೃಷಿ ಉತ್ಪನ್ನಗಳ ಹಣವನ್ನು ನಿಗದಿತ ಅವಧಿಯೊಳಗೆ ಪಾವತಿಯಾಗುವಂತೆ ಶಾಶ್ವತ ಕ್ರಮ ಕೈಗೊಳ್ಳಬೇಕು, ಹಮಾಲಿ ಕೂಲಿ ಸಹ ಸರ್ಕಾರ ಬಾಕಿ ಉಳಿಸಿಕೊಂಡಿದೆ, ಅದನ್ನು ಸಹ ಕೂಡಲೇ ಸಂದಾಯ ಮಾಡಬೇಕು, ಇಲ್ಲದಿದ್ದಲ್ಲಿ ಮುಂದಿನ ಹಂತದ ಹೋರಾಟ ಬೆಳೆಸಬೇಕಾಗುತ್ತದೆ  ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ  ನರೇಗಾ ಉಳಿಸಿ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷ ಕಲ್ಲುಕಂಬ ಪಂಪಾಪತಿ ರೈತರಾದ ಪಂಪನಗೌಡ, ಜನಾರ್ದನರೆಡ್ಡಿ, ರಾಜಶೇಖರ್ ಗೌಡ, ದೊಡ್ಡ ಬಸವನಗೌಡ , k.ವೀರನಗೌಡ, ಬಿಮಲಿಂಗಪ್ಪ, ನಾಗರಾಜ್, ಗವಿಸಿದ್ದನಗೌಡ, ಮಲ್ಲಿಕಾರ್ಜುನ, ಸುರೇಶ್ ಗೌಡ, ಮಲ್ಲಪ್ಪ  ಸೇರಿದಂತೆ ಹಲವಾರು ರೈತರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ