LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಕ್ರೀದ್ ಹಿನ್ನೆಲೆ ಅಕ್ರಮ ಗೋ ಸಾಗಾಟ ತಡೆಗೆ ಆಗ್ರಹ

ಬಳ್ಳಾರಿ, ಮೇ.27: ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ನಗರ ಅಧ್ಯಕ್ಷ ಅಶೋಕ್ ಚೌಹ್ವಾನ್ ಆಗ್ರಹಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಸೋಮವಾರ ತಹಶಿಲ್ದಾರರ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಜಾರಿಯಲ್ಲಿದ್ದರೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋಹತ್ಯೆ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ಹಿಂದೂ ಸಂಪ್ರದಾಯದಲ್ಲಿ ಗೋವನ್ನು ಪೂಜ್ಯನೀಯವಾಗಿ ಕಾಣಲಾಗುತ್ತಿದ್ದು, ಗೋಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತಿದೆ. ಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋಹತ್ಯೆ ನಡೆಯದಂತೆ ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಗಳ ಮೂಲಕ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಪ್ರಮುಖ ಸ್ಥಳಗಳಲ್ಲಿ ಪರಿಶೀಲನಾ ತಂಡಗಳನ್ನು ನೇಮಿಸಿ, ಚೆಕ್ಪೋಸ್ಟ್ಗಳನ್ನು ಸ್ಥಾಪಿಸಬೇಕು. ಮೇ 29ರವರೆಗೆ ಗೋ ಮಾರಾಟ ಹಾಗೂ ಜಾನುವಾರು ಸಂತೆಯನ್ನು ನಿಷೇಧಿಸಿ ಆದೇಶ ಹೊರಡಿಸಬೇಕು.
ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಗೋರಕ್ಷಕರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಂಯೋಜಕ ವಿನೋದ್ ಬಾಗಡೆ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸಹಕಾರ್ಯದರ್ಶಿ ಶಂಕರ್, ಕವಿತಾ, ಸುಗುಣಾ,ದೀಪಾ, ಹೇಮಂತ್, ಅರುಣ್,ಹುಲಗಣ್ಣ,ವಿಷ್ಣು, ಅಶೋಕ, ಅನಂತ, ಸಂಕೇತ, ಜ್ಯೋತಿ ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್