LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ: ಪ್ರಧಾನಿ ಮೋದಿ

ನವದೆಹಲಿ, 

ಅಮೆರಿಕದ ಶ್ವೇತಭವನದಲ್ಲಿ ಆಯೋಜಿಸಲಾಗಿದ್ದ ಗಣ್ಯರ ಸಭೆಯಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯಿಂದ ಇಡೀ ಜಗತ್ತು ಬೆಚ್ಚಿಬಿದ್ದಿದೆ. ಈ ಘಟನೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಖಂಡಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಎಕ್ಸ್ (X) ಮೂಲಕ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಸಮಾಧಾನವಾಯಿತು. ಅವರ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಎಂದಿಗೂ ಸ್ಥಾನವಿಲ್ಲ, ಇದನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು ಎಂದು ಹೇಳಿದ್ದಾರೆ. ಬಹು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದಾಳಿಕೋರನು ಭದ್ರತಾ ತಪಾಸಣಾ ಕೇಂದ್ರವನ್ನು ಭೇದಿಸಿ ಸಭಾಂಗಣದತ್ತ ಧಾವಿಸುತ್ತಿದ್ದ ದೃಶ್ಯಗಳು ವೈರಲ್ ಆಗಿವೆ. ಆದರೆ, ಸೀಕ್ರೆಟ್ ಸರ್ವಿಸ್ ಸಿಬ್ಬಂದಿ ಪ್ರಾಣದ ಹಂಗು ತೊರೆದು ಆತನನ್ನು ಹಿಮ್ಮೆಟ್ಟಿಸಿ ವಶಕ್ಕೆ ಪಡೆದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್ ಆಘಾತಕಾರಿ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ದಾಳಿಕೋರ ಹಾರಿಸಿದ ಗುಂಡು ಒಬ್ಬ ಭದ್ರತಾ ಅಧಿಕಾರಿಯ ಬುಲೆಟ್ ಪ್ರೂಫ್ ಜಾಕೆಟ್‌ಗೆ ನೇರವಾಗಿ ತಗುಲಿದೆ. ಅದೃಷ್ಟವಶಾತ್ ಅಧಿಕಾರಿ ಸುರಕ್ಷಿತವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ಘಟನೆಯು ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸುವ ಅಗತ್ಯವನ್ನು ಎತ್ತಿ ತೋರಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯ ಫೋಟೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಿಡುಗಡೆ ಮಾಡಿದ್ದಾರೆ. ನೂರಾರು ಅತಿಥಿಗಳು ಸೇರಿದ್ದ ಹೋಟೆಲ್‌ನ ಬಾಲ್ ರೂಂನ ಹೊರಗಿನ ಸ್ಕ್ರೀನಿಂಗ್ ಪ್ರದೇಶದಲ್ಲಿ ಬಂದೂಕುಧಾರಿಯನ್ನು ಬಂಧಿಸಲಾಗಿದೆ. ಟ್ರಂಪ್ ಅವರನ್ನು ವೇದಿಕೆಯಿಂದ ಕೆಳಗಿಳಿಸಲಾಯಿತು. ಶ್ವೇತಭವನದ ವರದಿಗಾರರ ಭೋಜನ ಕೂಟದಿಂದ ಶಂಕಿತ ಶೂಟರ್‌ನ ಮೊದಲ ಚಿತ್ರ ಹೊರಬಂದಿದ್ದು, ವಾಷಿಂಗ್ಟನ್ ಹಿಲ್ಟನ್‌ನ ಮೆಟ್ಟಿಲುಗಳ ಬಳಿ ಕಾನೂನು ಜಾರಿ ಸಂಸ್ಥೆಗಳು ಆತನನ್ನು ಬಂಧಿಸಿರುವುದನ್ನು ತೋರಿಸುತ್ತದೆ. ಶಂಕಿತ ಶೂಟರ್ ಅನ್ನು ಕ್ಯಾಲಿಫೋರ್ನಿಯಾದ ಟೊರೆನ್ಸ್‌ನ 31 ವರ್ಷದ ಕೋಲ್ ತೋಮಸ್ ಅಲೆನ್ ಎಂದು ಗುರುತಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್