LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಸಿಂಗೆ ಉಚ್ಛಾಟನೆಗೆ ದಲಿತ ಮುಖಂಡರ ಆಗ್ರಹ

ಬೆಳಗಾವಿ: ಲೋಕೋಪಯೋಗಿ ಸಚಿವ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ  ಅಂಬೇಡ್ಕರ್ ಜನಜಾಗೃತಿ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಜಯರಾಮ ರಾಸಿಂಗೆ ಅವರನ್ನು ತಕ್ಷಣವೇ ಸಂಘಟನೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಬೆಳಗಾವಿಯ ಪ್ರಮುಖ ದಲಿತ ಮುಖಂಡರು ಆಗ್ರಹಿಸಿದರು.
ಇಂದು ನಗರದ ಪ್ರವಾಸಿ ಮಂದಿರದಲ್ಲಿ ಜಂಟಿ ಪತ್ರಿಕಾಗೋಷ್ಠಿ ಮಾತನಾಡಿದ ದಲಿತ ಮುಖಂಡರು, ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ, ನಮ್ಮ ನಾಯಕರ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಸತೀಶ್ ಜಾರಕಿಹೊಳಿ ಅವರು ಕೇವಲ ಜಿಲ್ಲೆ ಅಥವಾ ರಾಜ್ಯಕ್ಕೆ ಸೀಮಿತವಾದ ನಾಯಕರಲ್ಲ, ಅವರು ರಾಷ್ಟ್ರ ನಾಯಕರು. ನಮ್ಮ ಸಂಘಟನೆ ಮತ್ತು ದಲಿತ ಸಮಾಜದ ಬಗ್ಗೆ ಅವರಿಗೆ ಅಪಾರ ಗೌರವ ಹಾಗೂ ಹೆಮ್ಮೆಯಿದೆ ಎಂದು ಹೇಳಿದರು.
ಅಂಬೇಡ್ಕರ್ ಜನಜಾಗೃತಿ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಜಯರಾಮ ರಾಸಿಂಗೆ ಅವರು ಇತ್ತೀಚೆಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ ದಲಿತ ಸಂಘಟನೆಗಳ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ಅಲ್ಲದೇ ರಾಸಿಂಗೆ ಹಿಂದೆ ಹತ್ತು ಜನ ಬೆಂಬಲಿಗರೂ ಇಲ್ಲ. ಅವನಿಗೂ ಚಲುವಾದಿ ಸಮಾಜಕ್ಕೂ ಯಾವುದೇ ಸಂಬಂಧವಿಲ್ಲ. ಕಳೆದ 40 ವರ್ಷಗಳಲ್ಲಿ ಜಿಲ್ಲೆಯಲ್ಲಿ ಇಂತಹ ಕೀಳು ಮಟ್ಟದ ಘಟನೆಗಳು ನಡೆದಿಲ್ಲ. ಸತೀಶ್ ಅಣ್ಣಾ ಅವರು ನಮ್ಮನ್ನೆಲ್ಲ ಬಹಳಷ್ಟು ಪ್ರೀತಿಯಿಂದ ಬೆಳೆಸಿದ್ದಾರೆ. ಇಂತಹ ನಾಯಕರ ವಿರುದ್ಧವೇ ಪಿತೂರಿ ನಡೆಸುತ್ತಿರುವ ರಾಸಿಂಗೆ ಅವರನ್ನು ತಕ್ಷಣವೇ ಸಂಘಟನೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಮಹಾವೀರ ಮೋಹಿತೆ ಹಾಗೂ ಮಲ್ಲೇಶ ಚೌಗಲಾ ಮಾತನಾಡಿ,  ಸತೀಶ್ ಜಾರಕಿಹೊಳಿ ಅವರಷ್ಟೇ ಅಲ್ಲದೆ, ಹಿಂದಿನಿಂದಲೂ ಪ್ರಭಾವಿ ದಲಿತ ನಾಯಕರನ್ನು ತುಳಿಯುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಸಿಂಗೆ ಅವರ ಈ ಹೇಳಿಕೆಯ ಹಿಂದೆ ಯಾರ ಕೈವಾಡವಿದೆ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಯಾವ ನಾಯಕ ಎಲ್ಲಿಂದ ಬೆಳೆದು ಬಂದಿದ್ದಾರೋ, ಅಲ್ಲಿಂದಲೇ ಅವರನ್ನು ತುಳಿಯುವ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಹಿರಂಗ ಕ್ಷಮೆಯಾಚನೆಗೆ ಗಡುವು: ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರಿಂದ ಇಂತಹ ಬೇಜವಾಬ್ದಾರಿ ಮತ್ತು ಗೊಂದಲಕಾರಿ ಹೇಳಿಕೆಗಳನ್ನು ಸಮಾಜ ನಿರೀಕ್ಷಿಸಿರಲಿಲ್ಲ. ಮಲ್ಲಿಕಾರ್ಜುನ ರಾಸಿಂಗೆ ಅವರು ತಕ್ಷಣವೇ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಒಂದು ವೇಳೆ ಅವರು ತಮ್ಮ ನಿಲುವನ್ನು ಬದಲಿಸದಿದ್ದರೆ ಮುಂಬರುವ ದಿನಗಳಲ್ಲಿ ಜಿಲ್ಲಾದ್ಯಂತ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಈ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸುನೀತಾ ಐಹೊಳೆ, ಕೆಂಪ್ಪಣ್ಣ ಸಿರಹಟ್ಟಿ, ಮಹಾದೇವ ತಳವಾರ, ಬಾಹುಸಾಬ ಪಾಂಡರೆ, ವಿಕ್ರಂ ಕರನಿಂಗ, ಸಂಜೀವ ಕಾಂಬಳೆ, ಶಾನುರ ತಹಶೀಲ್ದಾರ್ ಸೇರಿದಂತೆ ಬೆಳಗಾವಿ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ