LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹಡಪದ ಅಪ್ಪಣ್ಣ ಸಮುದಾಯ ಭವನ ಅಭಿವೃದ್ಧಿಗೆ ಚಾಲನೆ.

ಮಹಾಲಿಂಗಪುರ, ಜು. ೬: ಸಮೀಪದ ಚಿಮ್ಮಡ ಗ್ರಾಮದಲ್ಲಿ ಶ್ರೀ ಹಡಪದ ಅಪ್ಪಣ್ಣ ಸಮುದಾಯದ ಬಹುದಿನಗಳ ಕನಸಾಗಿದ್ದ ಸಮುದಾಯ ಭವನ ಅಭಿವೃದ್ಧಿ ಕಾಮಗಾರಿಗೆ ಸರ್ಕಾರದಿಂದ ಮಂಜೂರಾದ ?೫ ಲಕ್ಷ ಅನುದಾನದ ಕಾಮಗಾರಿಗೆ ಶಾಸಕ ಸಿದ್ದು ಸವದಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಸಿದ್ದು ಸವದಿ ಅವರು, ಹಡಪದ ಅಪ್ಪಣ್ಣ ಅವರು ವಚನ ಸಾಹಿತ್ಯ ಮತ್ತು ಶರಣ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ ಮಹನೀಯರಾಗಿದ್ದು, ಅವರ ತತ್ವಾದರ್ಶಗಳನ್ನು ಪಾಲಿಸುವ ಸಮಾಜದ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು. ಸಮುದಾಯ ಭವನಗಳು ಕೇವಲ ಕಟ್ಟಡಗಳಾಗಿರದೆ, ಸಮಾಜದ ಜನರನ್ನು ಒಗ್ಗೂಡಿಸುವ ಹಾಗೂ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಲಿವೆ ಎಂದು ತಿಳಿಸಿದರು.
ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದರು. ಗ್ರಾಮೀಣ ಭಾಗದ ಎಲ್ಲ ಸಮುದಾಯಗಳಿಗೂ ಮೂಲಸೌಕರ್ಯ ಕಲ್ಪಿಸುವ ಮೂಲಕ ಸಾಮಾಜಿಕ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಮ.ನಿ. ಪ್ರಭು ಸ್ವಾಮೀಜಿಗಳು ಆಶೀರ್ವಚನ ನೀಡಿ, ಸಮಾಜದ ಅಭಿವೃದ್ಧಿಗಾಗಿ ಜನಪ್ರತಿನಿಧಿಗಳು ಕೈಗೊಳ್ಳುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಶಿಕ್ಷಣ, ಸಂಘಟನೆ ಹಾಗೂ ಸಾಮಾಜಿಕ ಜಾಗೃತಿಯ ಮೂಲಕ ಸಮಾಜ ಇನ್ನ? ಪ್ರಗತಿಯತ್ತ ಸಾಗಬೇಕು. ನಿರ್ಮಾಣವಾಗುತ್ತಿರುವ ಸಮುದಾಯ ಭವನವು ಸಮಾಜದ ಎಲ್ಲ ವರ್ಗದವರನ್ನು ಒಗ್ಗೂಡಿಸುವ ಕೇಂದ್ರವಾಗಲಿ ಎಂದು ಹಾರೈಸಿದರು.
ಸಮುದಾಯದ ಮುಖಂಡ ಶಿವಾನಂದ ನಾವಿ ಮಾತನಾಡಿ, ಸಮುದಾಯ ಭವನ ನಿರ್ಮಾಣವು ನಮ್ಮ ಸಮಾಜದ ಬಹುವ?ಗಳ ಬೇಡಿಕೆಯಾಗಿತ್ತು. ಶಾಸಕರ ಪ್ರಯತ್ನದಿಂದ ಅನುದಾನ ದೊರೆತಿರುವುದು ಸಂತಸದ ಸಂಗತಿಯಾಗಿದೆ. ಈ ಭವನದಿಂದ ಸಮಾಜದ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗುರುಲಿಂಗಪ್ಪ ಪೂಜಾರಿ, ಶಂಕರ ಬಟಕುರ್ಕಿ, ಬೀರಪ್ಪ ಹಳಮಣಿ, ಪ್ರಭು ಮುಧೋಳ, ಮನೋಜ ಹಟ್ಟಿ, ಚೆನ್ನಪ್ಪ ತೇಲಿ, ಪ್ರಕಾಶ ಪಾಟೀಲ, ಕುಮಾರ್ ಪೂಜಾರಿ, ಆನಂದ ಕೌಟಿ, ಅವ್ವಣ್ಣಪ್ಪ ಮುಗಳಕೋಡ, ನಾಗಪ್ಪ ನಾವಿ, ಪ್ರಭು ನಾವಿ, ಅಲ್ಲಪ್ಪ ನಾವಿ, ಮಹಾಲಿಂಗ ನಾವಿ, ಬಸವರಾಜ ನಾವಿ, ಶ್ರೀಶೈಲ ನಾವಿ ಸೇರಿದಂತೆ ಸಮಾಜದ ಮುಖಂಡರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್