LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾಮಣೆಯಲ್ಲಿ   ಕೆರೆ ಹೂಳೆತ್ತುವ  ಕಾಮಗಾರಿಗೆ ಚಾಲನೆ



ಬೆಳಗಾವಿ: ತಾಲೂಕು ವ್ಯಾಪ್ತಿಯ   ಧಾಮಣೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ʻನಮ್ಮೂರು ನಮ್ಮ ಕೆರೆʼ ಕಾರ್ಯಕ್ರಮದ ಅನುದಾನದಲ್ಲಿ ಪುನಶ್ಚೇತನಗೊಳ್ಳಲಿರುವ ಮಾದರಿ ನಮ್ಮೂರು ನಮ್ಮ ಕೆರೆ ಹೂಳೆತ್ತುವ  ಗಣೇಶ ಕೆರೆಯ ಕಾಮಗಾರಿಗೆ  ಕೆರೆ ಸಮೀತಿ ಅಧ್ಯಕ್ಷರಾದ ಮಹಾದೇವ ಚೌಗಲೆ ಅವರು ಭೂಮಿ ಪೂಜೆ  ನೆರವೇರಿಸಿದರು.

ತಾಲೂಕು ಯೋಜನಾಧಿಕಾರಿಗಳು ಪಾರ್ವತಿ  ಅವರು ಮಾತನಾಡಿ,  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ , ದೇವಸ್ಥಾನ ಜೀರ್ಣೋದ್ಧಾರ, ಸಮುದಾಯ ಭವನ ಕಟ್ಟಡಗಳಿಗೆ ಅನುದಾನ,  ಸರ್ಕಾರಿ ಶಾಲೆಗಳಿಗೆ ಡೆಸ್ಕ್ ಬೆಂಚು ವಿತರಣೆ , ವೃತ್ತಿ ಪರ ಶಿಕ್ಷಣಕ್ಕೆ ವಿದ್ಯಾರ್ಥಿನಿಯರಿಗೆ  ಶಿಷ್ಯವೇತನ, ರುದ್ರಭೂಮಿ ಅನುದಾನ,  (ಚೇಂಬರ್)ಜನಮಂಗಲ ಕಾರ್ಯಕ್ರಮ , ನಿರ್ಗತಿಕರಿಗೆ ಮಾಶಾಸನ ವಿತರಣೆ , ಈ ರೀತಿಯಾಗಿ ಹಲವಾರು ಕಾರ್ಯಕ್ರಮಗಳ ಜೊತೆ   ನಮ್ಮೂರು ನಮ್ಮ ಕೆರೆ ಕಾರ್ಯಕ್ರಮವು ಅತೀ ಪ್ರಮುಖವಾಗಿದೆ. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ   ರಾಜ್ಯದ ಅಭಿವೃದ್ದಿಗೆ  ಸಹಕಾರಿಯಾಗಿದೆ ಎಂದರು.

ರಾಜ್ಯದಾದ್ಯಂತ ಸುಮಾರು 1000 ಕೆರೆಗಳನ್ನು ಪುನಃಶ್ಚೇತನಗೊಳಿಸಿದ್ದಾರೆ.   ನಮ್ಮೂರು ನಮ್ಮ ಕೆರೆ ಯೋಜನೆಯಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿದೆ.  ಪ್ರಾಣಿ ಪಕ್ಷಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಆಗಿದೆ, ಇದರಿಂದಾಗಿ ಸಮಾಜ ಸಂಕುಲಕ್ಕೆ ಒಳಿತು ಆಗಿರುತ್ತದೆ. ಜನನದಿಂದ ಮರಣದವರೆಗೂ ಎಲ್ಲಾ ಕಾರ್ಯಕ್ರಮಗಳಿಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಕ್ಕೆ ಒಳಿತು ಆಗುವಂತೆ ಕಾರ್ಯಕ್ರಮ ಅನುಷ್ಠಾನ ಮಾಡುತ್ತಾ ಬಂದಿದೆ. ಜೀವ ಜಲ ಉಳಿಸಿ ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಹೇಳಿದರು.

ಧಾರವಾಡ ಪ್ರಾದೇಶಿಕ ವಿಭಾಗದ ಕೆರೆ ಅಭಿಯಂತರರು ನಿಂಗರಾಜ ಅವರು  ಮಾತನಾಡಿ, ಗಣೇಶ ಕೆರೆ ಹೂಳು ತೆಗೆಯಲು ಕೆರೆ ಸಮೀತಿ ಅವರು ಉತ್ತಮ ರೀತಿಯಲ್ಲಿ ಸಹಕಾರ ನೀಡಬೇಕು.  ಕೆರೆಗೆ ತಂತಿ ಬೇಲಿ ಹಾಕಿಸಿ, ಮಾದರಿ ಕೆರೆಯನ್ನಾಗಿ ರಚನೆ ಮಾಡಿ, ಬಳಿಕ ಹಸ್ತಾಂತರ ಮಾಡಲಾಗುವುದು. ಬಳಿಕ,  ಕೆರೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ತಲಾಟಿ ಸಿದ್ದು, ಆನಂದ ಜಯಾನಾಚೆ,  ಊರಿನ ಪ್ರಮುಖರು, ಗ್ರಾಮಸ್ಥರು, ಕೆರೆ ಸಮೀತಿ ಸರ್ವ ಸದಸ್ಯರು, ಒಕ್ಕೂಟದವರು , ಸೇವಾಪ್ರತಿನಿಧಿ ರೇಖಾ , ವಿ ಎಲ್ ಈ ಪ್ರತೀಕ, ಉಪಸ್ಥಿತರಿದ್ದರು. ಕೃಷಿ ಮೇಲ್ವಿಚಾರಕ ಮಹಾಂತೇಶ  ನಿರೂಪಿಸಿ ,  ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್